ಎನ್ ಆರ್ ರಮೇಶ್ 
ರಾಜಕೀಯ

ಪ್ರಾಮಾಣಿಕತೆಗೆ ಬೆಲೆಯಿಲ್ಲ, ಟಿಕೆಟ್ ತಪ್ಪಲು ಅನಂತ್ ಕುಮಾರ್ ಕಾರಣ: ಎನ್ ಆರ್ ರಮೇಶ್ ಆರೋಪ

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ...

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಟಿಕೆಟ್ ತಮ್ಮ ಕೈ ತಪ್ಪಲು ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಕಾರಣ ಎಂದು ಬಿಜೆಪಿ ನಗರ ವಕ್ತಾರ ಎನ್ .ಆರ್ ರಮೇಶ್ ನೇರ ಆರೋಪ ಮಾಡಿದ್ದಾರೆ.
ಚಿಕ್ಕಪೇಟೆಗೆ ರಮೇಶ್ ಬದಲಾಗಿ ಉದಯ ಗರುಡಚಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಂಘಪರಿವಾರದ ಸದಸ್ಯರು ಸೇರಿದಂತೆ ಹಲವು ಬಿಜೆಪಿ ನಾಯಕರು ನನಗೆ ಟಿಕೆಟ್ ಕೊಡಲು ಬಯಸಿದ್ದರು. ಆದರೆ ಅನಂತ್ ಕುಮಾರ್ ಮತ್ತು ಕೆಲವು ನಾಯಕರು ಇದನ್ನು ತಪ್ಪಿಸಿದ್ದಾರೆ, ಬಿಜೆಪಿಯಲ್ಲಿ ಪ್ರಾಮಾಣಿಕತೆಗೆ ಬೆಲೆಯಿಲ್ಲ, ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
2010ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ರಮೇಶ್, ಸಿದ್ದರಾಮಯ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದರು.
ರಮೇಶ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಸಂಜೆ ಸಭೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಹಲವು ನಾಯಕರು ರಮೇಶ್ ಮನವೊಲಿಸಲು ಯತ್ನಿಸಿದರು. ಅವರು ನನಗೆ ಕೆಲವೊಂದು ಆಯ್ಕೆಗಳನ್ನು ನೀಡಿದ್ದಾರೆ. ಆದರೆ ಅದ್ಯಾವುದು ಮಾಡಲು ಅಸಾಧ್ಯ ಎಂದು ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!