ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆಂಪಯ್ಯ ವಿರುದ್ಧದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ಅಮಿತ್ ಶಾ ಎರಡು ವರ್ಷಗಳ ಹಿಂದೆ ಹತ್ಯೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಅವರ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ರು 5 ಲಕ್ಷ ಪರಿಹಾರ ಚೆಕ್ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.
ಪೊಲೀಸ್ ಆಯುಕ್ತರು, ಉಪ ಆಯುಕ್ತರು ಮತ್ತು ಪ್ರಾದೇಶಿಕ ಆಯುಕ್ತರು ವಿಚಾರಣೆ ನಡೆಸಿದ್ದು, ಈ ದೂರಿಗೆ ಯಾವುದೇ ಆದಾರವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ,ಟಿವಿ ಚಾನೆಲ್ ಗೆ ಹೇಳಿಕೆ ನೀಡಿದ್ದ ಮಹಿಳೆ ತನ್ನ ಹೇಳಿಕೆಯನ್ನೇ ಬದಲಾಯಿಸಿದ್ದಾರೆ, ಅಮಿತ್ ಶಾ ಯಾವುದೇ ಚೆಕ್ ಅಥವಾ ಭರವಸೆ ನೀಡಿಲ್ಲ ಎಂದು ಆಕೆ ಹೇಳಿಕೆ ಬದಲಿಸಿದ್ದಾರೆ, ಹೀಗಾಗಿ ಆಕೆಯ ಹೇಳಿಕೆಯನ್ನು ಪ್ರಾದೇಶಿಕ ಆಯುಕ್ತರು ಹೇಳಿಕೆಯ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಚಿವ ಎ.ಮಂಜು ಕೂಡ ದೂರು ದಾಖಲಿಸಿದ್ದಾರೆ,
ಮಾಜಿ ಪ್ರದಾನಿ ಎಚ್ ಡಿ ದೇವೇಗೌಡ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ನೀಡಿದ್ದರು, ಹಣವನ್ನು ತಮ್ಮ ಜೀಪಿನಲ್ಲಿ ಸಾಗಿಸಿದ್ದಾರೆ ಎಂದು ದೂರಿದ್ದರು,. ದೇವೇಗೌಡರ ದೂರಿನ ನಂತರ ಅಧಿಕಾರಿಗಳು ತನಿಖೆ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ರೋಹಣಿ ಸಿಂಧೂರಿ ಅವರು ಚುನಾವಣಾ ನೀತಿ ಸಂಹಿತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಮಂಜು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics