ಸಿದ್ಧಾರೂಢ ಮಠದಲ್ಲಿ ಅಮಿತ್ ಶಾ 
ರಾಜಕೀಯ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು, ಶ್ರೀಗೆ ಟಿಕೆಟ್ ನೀಡಲು ಅಮಿತ್ ಶಾಗೆ ಆಗ್ರಹ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮೀಜಿಯ ಹೆಸರಿಡಬೇಕು ಮತ್ತು ಮಠದ ಶ್ರೀ ಪರಮರೂಢ...

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮೀಜಿಯ ಹೆಸರಿಡಬೇಕು ಮತ್ತು ಮಠದ ಶ್ರೀ ಪರಮರೂಢ ಸ್ವಾಮೀಜಿ ಅವರಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಗುರುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಒತ್ತಾಯಿಸಿದೆ.
ಇಂದು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರಿಗೆ ಮಠದ ಪರವಾಗಿ ಸನ್ಮಾನ ಮಾಡಲಾಯಿತು. ಬಳಿಕ ಪ್ರಸಾದ ನಿಲಯ ನಿರ್ಮಾಣಕ್ಕೆ 30 ಲಕ್ಷ ರುಪಾಯಿ ಹಾಗೂ ಮಠದ ಆವರಣದಲ್ಲಿ ಬಾತ್ ರೂಮ್ ಮತ್ತು ಶೌಚಾಲಯ ನಿರ್ಮಾಣಕ್ಕೆ 20 ಲಕ್ಷ ರುಪಾಯಿ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿಯ ಹೆಸರಿಡಲು ಕ್ರಮ ತೆಗೆದುಕೊಳ್ಳಬೇಕು ಮತ್ತು ಪರಮರೂಢ ಶ್ರೀಗಳಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವೊಂದನ್ನು ಬಿಜೆಪಿ ಅಧ್ಯಕ್ಷರಿಗೆ ಸಲ್ಲಿಸಲಾಯಿತು.
ನಾನು ಈಗಾಗಲೇ ಬೀಳಗಿ ಕ್ಷೇತ್ರದ 130 ಗ್ರಾಮಗಳಲ್ಲಿ ಪ್ರಚಾರ ಮಾಡಿದ್ದೇನೆ. ಬಿಜೆಪಿ ಟಿಕೆಟ್ ಗಾಗಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಅರ್ಜಿ ಸಹ ಸಲ್ಲಿಸಿದ್ದೇನೆ. ಈ ಹಿಂದೆ ಬಿಜೆಪಿ ಅಭ್ಯರ್ಥಿ ಗೆಲುವುಗಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದು ಸೀಮೆಕೇರಿಯ ಶ್ರೀ ಪರಮರೂಢ ಸ್ವಾಮೀಜಿ ಹೇಳಿದ್ದಾರೆ.
ಈ ವೇಳೆ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷ ಡಿಡಿ ಮಳಗಿ ಮತ್ತು ಗೌರವ ಕಾರ್ಯದರ್ಶಿ ಎಐ ಕೊಳಕೂರ್ ಹಾಗೂ ಇತತರು ಉಪಸ್ಥಿತರಿದ್ದರು.
ನಿತ್ಯ ಓಂ ನಮಃ ಶಿವಾಯ ಹೇಳುವ ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಮಠದಲ್ಲಿ ಇಂದು ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರ ಘೋಷಣೆಗಳು ಕೇಳಿಬಂದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ