ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಾದಾಮಿಯಿಂದಲೂ ಸ್ಪರ್ಧಿಸುವಂತೆ ಸಿಎಂಗೆ ಕಾಂಗ್ರೆಸ್ ಮುಖಂಡರ ಮನವಿ

ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ....

ಬಾದಾಮಿ ಕಾಂಗ್ರೆಸ್ ಮುಖಂಡರೊಂದಿಗೆ ಸಿಎಂ
Lingaraj Badiger
Updated On : 12 Apr 2018, 5:07 am
ಬೆಂಗಳೂರು: ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದಲೂ ಸ್ಪರ್ಧಿಸುವಂತೆ ಗುರುವಾರ ನೂರಾರು ಜಿಲ್ಲಾ ಕಾಂಗ್ರೆಸ್ ಮುಂಖಡರು ಮನವಿ ಮಾಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್ ಹಾಗೂ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಹಾಗೂ ಕುರುಬ ಸಮುದಾಯದ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಬೇಕು. ಮುಖ್ಯಮಂತ್ರಿಗಳ ಸ್ಪರ್ಧೆಯಿಂದ ಈ ಭಾಗದಲ್ಲಿ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಾಕರಿಯಾಗಲಿದೆ ಎಂದು ಹೇಳಿದ್ದಾರೆ.

Advertisement

Advertisement

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಾಗಲಕೋಟೆ ಹಾಗೂ ಬಾದಾಮಿ ಕಾಂಗ್ರೆಸ್ ಮುಖಂಡರು ತಮ್ಮ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸಲಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಎರಡು ಕಡೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದ್ದು, ಚಾಮುಂಡೇಶ್ವರಿಯಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಸಿಎಂ ಬಾದಾಮಿಯಲ್ಲೂ ಸ್ಪರ್ಧಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments