ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಶಾಸಕಿ ಸೀಮಾ ಮಸೂತಿ ರಾಜಿನಾಮೆ ನೀಡಿದ್ದಾರೆ.
ಬಿಜೆಪಿ ಬಿಡುಗಡೆ ಮಾಡಿರುವ ಮೊದಲ 72 ಅಭ್ಯರ್ಥಿಗಳ ಪಟ್ಟಿಯಲ್ಲಿ ಸೀಮಾ ಮಸೂತಿ ಹೆಸರಿಲ್ಲ,ಹೀಗಾಗಿ ಧಾರವಾಡ ಕ್ಷೇತ್ರದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಮೇ 12 ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಟಿಕೆಟ್ ಹಂಚಿಕೆ ಬಗ್ಗೆ ಹಲವು ಮಂದಿ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.