ಪರಮೇಶ್ವರ - ಸಿದ್ದರಾಮಯ್ಯ 
ರಾಜಕೀಯ

ಟಿಕೆಟ್ ಗಾಗಿ ಕಸರತ್ತು: ದಿಲ್ಲಿಯಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ಮುಖಂಡರು, ಆಕಾಂಕ್ಷಿಗಳು

ದೆಹಲಿಯ ಕರ್ನಾಟಕ ಭವನ ಮತ್ತು ಕರೋಲ್ ಬಾಗ್ ದಲ್ಲಿರುವ ಹೋಟೆಲ್ ಗಳಲ್ಲಿ ಕಾಂಗ್ರೆಸ್ ಮುಖಂಡರೇ...

ನವದೆಹಲಿ: ದೆಹಲಿಯ ಕರ್ನಾಟಕ ಭವನ ಮತ್ತು ಕರೋಲ್ ಬಾಗ್ ದಲ್ಲಿರುವ ಹೋಟೆಲ್ ಗಳಲ್ಲಿ ಕಾಂಗ್ರೆಸ್ ಮುಖಂಡರೇ ತುಂಬಿಕೊಂಡಿದ್ದು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಾಗಿ ಪರೇಡ್ ನಡೆಸುತ್ತಿದ್ದಾರೆ. 
ಹಲವು ಮುಖಂಡರು ದೆಹಲಿಯಲ್ಲೇ ಉಳಿದುಕೊಂಡು ಟಿಕೆಟ್ ಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. 
ರಾಜ್ಯದ ಬಹುತೇಕ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ಆಗಮಿಸಿದ್ದು, ಟಿಕೆಟ್ ಗಾಗಿ ಸಂಸದರು, ಸಚಿವರು ಮತ್ತು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸಿದ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ಕರ್ನಾಟಕ ಭವನದಲ್ಲಿ ಯಾವುದೇ ರೂಮ್ ಗಳು ಸಿಗುತ್ತಿಲ್ಲ. ಇಲ್ಲಿ ನೂರಾರು ಕನ್ನಡಗರಿದ್ದು, ಮಿನಿ ಬೆಂಗಳೂರು ನಿರ್ಮಾಣವಾಗಿದೆ ಎಂದು ಕೋಲಾರ್ ಟಿಕೆಟ್ ಆಕಾಂಕ್ಷಿಯೊಬ್ಬರು ಹೇಳಿದ್ದಾರೆ.
ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್ ಸಹ ಭಾರಿ ಕಸರತ್ತು ನಡೆಸುತ್ತಿದ್ದು, ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಮುಖಂಡರೊಂದಿಗೆ ಸರಣಿ ಸಭೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ