ಶ್ರೀರಾಮುಲು 
ರಾಜಕೀಯ

ಮೊಳಕಾಲ್ಮೂರು: ತಿಪ್ಪೇಸ್ವಾಮಿಗೆ ತಪ್ಪಿದ ಬಿಜೆಪಿ ಟಿಕೆಟ್, ಶ್ರೀರಾಮುಲು ಕಾರಿಗೆ ಕಲ್ಲು, ಕ್ಷೇತ್ರದಲ್ಲಿ ತೀವ್ರ ಅಸಮಾಧಾನ

ಮೊಳಕಾಲ್ಮುರಿನ ಬಿಜೆಪಿ ಶಾಸಕ ಎಸ್ ತಿಪ್ಪೇಸ್ವಾಮಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ‌ ಎಂದು ಆರೋಪಿಸಿ ...

ಚಿತ್ರದುರ್ಗ: ಮೊಳಕಾಲ್ಮುರಿನ ಬಿಜೆಪಿ ಶಾಸಕ ಎಸ್ ತಿಪ್ಪೇಸ್ವಾಮಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ‌ ಎಂದು ಆರೋಪಿಸಿ  ತಿಪ್ಪೇಸ್ವಾಮಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.  ಮೊಳಕಾಲ್ಮೂರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದ ಸಂಸದ ಶ್ರೀರಾಮುಲು ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. 
ಚಳ್ಳಕೆರೆಯ ನಾಯಕನ ಹಟ್ಟಿ ದೇಗುಲದ ಬಳಿ ಶ್ರೀರಾಮುಲು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದು ಕಾರಿನ ಗಾಜು ಪುಡಿ ಪುಡಿಯಾಗಿದೆ. ಶ್ರೀರಾಮುಲು ಅವರು ಭಾರೀ ಭದ್ರತೆಯೊಂದಿಗೆ ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ  ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ್ದಾರೆ.  ದೇಗುಲದ ಬಳಿ ನೂರಾರು ತಿಪ್ಪೇಸ್ವಾಮಿ ಬೆಂಬಲಿಗರು ಜಮಾವಣೆ ಗೊಂಡಿದ್ದು ಧಿಕ್ಕಾರಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಮೊಳಕಾಲ್ಮೂರಿನಲ್ಲಿ ಹೆಚ್ಚುವರಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. 
ತಿಪ್ಪೇಸ್ವಾಮಿ ಬೆಂಬಲಗಿರು ಶ್ರೀರಾಮುಲು ಅವರ ಬೆಂಬಲಕ್ಕೆ ನಿಂತ ಬಿಜೆಪಿ ತಾಲೂಕು ಕಾರ್ಯದರ್ಶಿ ವೆಂಕಟ ಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಿಪ್ಪೇಸ್ವಾಮಿ ಬೆಂಬಲಿಗರು ಮತ್ತು ವೆಂಕಸ್ವಾಮಿ ಬೆಂಬಲಿತ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಸ್ಥಳದಲ್ಲಿ  ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ. 
ತಿಪ್ಪೇಸ್ವಾಮಿ ಬೆಂಬಲಿಗರು 'ಗೋ ಬ್ಯಾಕ್‌ ಶ್ರೀರಾಮುಲು' ಎಂಬ ಘೋಷಣೆ ಕೂಗುತ್ತಿದ್ದಾರೆ. ಶ್ರೀರಾಮುಲು ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರು ಬೀದಿಗಿಳಿದು ತಿಪ್ಪೇಸ್ವಾಮಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಹಲವರು ಚಪ್ಪಲಿ ತೂರಾಟ ಮಾಡಿದ್ದು, ಪೊರಕೆಗಳನ್ನು ಪ್ರದರ್ಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ