ಕರ್ನಾಟಕ ಚುನಾವಣೆ: ಏ. 15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ
ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಏ.15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ನವದೆಹಲಿ: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಏ.15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಈ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.ಏ. 8 ರಂದು ನಡೆದಿದ್ದ ಸಭೆಯಲ್ಲಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಮಂತ್ರಿ ನರೇಂದ್ರಮೋದಿ, ಗೃಹ ಸಚಿವ ರಾಜನಾಥ್ ಸಿಂಗ್ , ಹಣಕಾಸು ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಈ ಸಮಿತಿಯಲ್ಲಿದ್ದಾರೆ.
225 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 12 ರಂದು ತುನಾವಣೆ ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬರಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.