ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಹೇಳಿಕೆ ಖಂಡಿಸಿರುವ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುರಿತಾಗಿ ಮಾತನಾಡಿದ್ದ ಗುಂಡೂರಾವ್ "ಆದಿತ್ಯನಾಥ್ ಭಾರತ ರಾಜಕಾರಣದಲ್ಲಿರುವುದು ನಾಚಿಕೆಗೇಡಿನ ಸಂಗತಿ. ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಅನರ್ಹರು. ಅವರೇನಾದರೂ ಸಂಬಾವಿತರಾದರೆ ತಕ್ಷಣ ರಾಜೀನಾಮೆ ನೀಡಬೇಕು. ಅವರ ಪಕ್ಷದ ಶಾಸಕ ಎಸಗಿದ ಅಪರಾಧದ ಹೊಣೆಹೊತ್ತು ಅವರು ರಾಜೀನಾಮೆ ಸಲ್ಲಿಸಬೇಕು.
"ಯೋಗಿ ಒಬ್ಬ ಡೊಂಗಿ ರಾಜಕಾರಣಿ. ಅವರೇನಾದರೂ ಮತ್ತೆ ಕರ್ನಾಟಕಕ್ಕೆ ಬಂದಲ್ಲಿ ಚಪ್ಪಲಿಯಲ್ಲಿ ಹೊಡೆಯಿರಿ.
"ಓರ್ವ ಹುಡುಗಿ ಮೇಲೆ ಅತ್ಯಾಚಾರವಾಗಿದೆ, ಆಕೆಯ ತಂದೆ ಪೋಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಆದರೆ ಉತ್ತರ ಪ್ರದೇಶ ಸರ್ಕಾರ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಿಲ್ಲ" ಗುಂಡೂರಾವ್ ಮಾದ್ಯಮಕ್ಕೆ ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದಾರೆ.
ಕಳೆದ ವರ್ಷ ಉತ್ತರ ಪ್ರದೇಶ ಬಿಜೆಪಿ ಶಾಸಕರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದರೆಂದು ಆರೋಪಿಇಸಿ ಉನ್ನಾವೋ ಮೂಲದ ಬಾಲಕಿಯೊಬ್ಬಳು ದೂರಿತ್ತಿದ್ದಳು. ಈ ಸಂಬಂಧ ಶಾಸಕ, ಅವರ ಸೋದರ ಹಾಗೂ ಇನ್ನೂ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ಅವರನ್ನು ಜೈಲಿಗಟ್ಟಲಾಗಿದೆ. ಇದೇ ವೇಳೆ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಏಳು ದಿನಗಳ ಕಾಲ ಪೋಲೀಸ್ ಕಸ್ಟಡಿಯಲ್ಲಿರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics