ದಿನೇಶ್ ಗುಂಡೂರಾವ್, ಯೋಗಿ ಆದಿತ್ಯನಾಥ್ 
ರಾಜಕೀಯ

ಯೋಗಿ ಆದಿತ್ಯನಾಥ್ ವಿರುದ್ಧ ಹೇಳಿಕೆ: ವಿಷಾದ ವ್ಯಕ್ತಪಡಿಸಿದ್ರು ದಿನೇಶ್‌ ಗುಂಡೂರಾವ್‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ ಕಾರ್ಯಧ್ಯಕ್ಷ...

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ ಕಾರ್ಯಧ್ಯಕ್ಷ  ದಿನೇಶ್ ಗುಂಡೂರಾವ್ ಅವರು ಭಾನುವಾರ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ನಿನ್ನೆ ಯೋಗಿ ಆದಿತ್ಯನಾಥ ಅವರು ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡಿಯಿರಿ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದರು. ಅವರ  ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಬಿಜೆಪಿ ಪ್ರತಿಭಟನೆಗೆ ಮಣಿದ ದಿನೇಶ್ ಗುಂಡೂರಾವ್ ಅವರು, ನಾನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಕಥುವಾ ಮತ್ತು ಉನ್ನಾವ್‌ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಭಾವೋದ್ವೇಗದಿಂದ ಹೇಳಿದ್ದೇನೆ. ಅದರ ಬಗ್ಗೆ ನನಗೆ ವಿಷಾದವಿದೆ. ಆದರೆ, ವಿಷಯ ಗಂಭೀರ, ಅದರ ಬಗ್ಗೆ ಕ್ರಮವಾಗಬೇಕು. ನನ್ನ ಮಾತಿನ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳಬೇಕು. ಒಬ್ಬ ಮಹಿಳೆಗೆ ನ್ಯಾಯಕೊಡಿಸಬೇಕು ಎಂದಬುದೇ ನಮ್ಮ ಉದ್ದೇಶವಾಗಿತ್ತು ಬೇರೇನೂ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಅತ್ಯಾಚಾರ ಬಲಿಪಶುಗಳ ಪರವಾದ ನೋವು ಮತ್ತು ಆದಿತ್ಯನಾಥ್ ಸರ್ಕಾರದ ಸಂಪೂರ್ಣ ನಿರಾಸಕ್ತಿ ಕುರಿತಾಗಿ ಭಾವನಾತ್ಮಕ  ಆಕ್ರೋಶವಾಗಿತ್ತು. ಅದು ಆಕ್ರಮಣಕಾರಿ ಎಂದಾದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ಉತ್ತರ ಪ್ರದೇಶದಲ್ಲಿ ಕಾನೂನ ಸುವ್ಯವಸ್ಥೆ ವಿಚಾರ ಗಂಭೀರವಾಗಿದೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್‌ ಮಾಡಿದ್ದಾರೆ. 
'ಯೋಗಿ ಒಬ್ಬ ಡೊಂಗಿ ರಾಜಕಾರಣಿ. ಅವರೇನಾದರೂ ಮತ್ತೆ ಕರ್ನಾಟಕಕ್ಕೆ ಬಂದಲ್ಲಿ ಚಪ್ಪಲಿಯಲ್ಲಿ ಹೊಡೆಯಿರಿ' ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್