ಸಂಗ್ರಹ ಚಿತ್ರ 
ರಾಜಕೀಯ

ಶಾಂತಿನಗರ ಸೇರಿ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡದ ಕಾಂಗ್ರೆಸ್

ಬಹುತೇಕ ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆಯಾದರೂ, ಬೆಂಗಳೂರಿನ ಶಾಂತಿನಗರ ಸೇರಿದಂತೆ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.

ಬೆಂಗಳೂರು: ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷ ಬಹುತೇಕ ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆಯಾದರೂ, ಬೆಂಗಳೂರಿನ ಶಾಂತಿನಗರ ಸೇರಿದಂತೆ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.
ಈ ಹಿಂದೆ ಘೋಷಣೆ ಮಾಡಿದಂತೆಯೇ ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಈ ಹಿಂದೆ ನಿಧನರಾದ ಈ ಕ್ಷೇತ್ರದ ಶಾಸಕ ಹಾಗೂ ಹಿರಿಯ ರೈತ ಮುಖಂಡ ಕೆಎಸ್ ಪುಟ್ಟಣ್ಣಯ್ಯ ಅವರಿಗಾಗಿ ಅವರ ಚುನಾವಣೆಗೆ ನಿಂತಿರುವ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಇದನ್ನು ಹೊರತು ಪಡಿಸಿದರೆ ಬೆಂಗಳೂರಿನ ಶಾಂತಿನಗರ ಸೇರಿದಂತೆ ನಾಗಥಾಣಾ,   ರಾಯಚೂರು, ಸಿಂಧಗಿ ಮತ್ತು ಕಿತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. 
ನಲಪಾಡ್ ಪ್ರಕರಣದಿಂದ ಶಾಂತಿನಗರದಲ್ಲಿ ಹಾಲಿ ಶಾಸಕ ಮತ್ತು ನಲಪಾಡ್ ತಂದೆ ಎನ್ ಎ ಹ್ಯಾರಿಸ್ ತೀವ್ರ ಮುಜುಗರಕ್ಕೀಡಾಗಿದ್ದಾರೆ. ಅಲ್ಲದೆ ಈ ಪ್ರಕರಣ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ತೀವ್ರ ಮುಜುಗರವನ್ನುಂಟು ಮಾಡಿದ್ದು, ಇದೇ ಕಾರಣಕ್ಕೆ ಶಾಂತಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಎನ್ನಲಾಗಿದೆ. ಇನ್ನು ಮೇಲುಕೋಟೆಯಲ್ಲಿ ಈ ಹಿಂದೆ ಹೇಳಿದಂತೆ ಪುಟ್ಟಣ್ಣಯ್ಯ ಅವರಿಗಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT