ಎಚ್.ಡಿ ದೇವೇಗೌಡ 
ರಾಜಕೀಯ

ರಾಜ್ಯ ವಿಧಾನಸಭೆ ಚುನಾವಣೆ : ದೇವೇಗೌಡರ ನಾಲ್ಕನೇ ಪುತ್ರನಿಂದ ಡ್ಯಾಮೇಜ್ ಕಂಟ್ರೋಲ್!

ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್,ಡಿ ದೇವೇಗೌಡ ಅವರ 4ನೇ ಮಗನವಾಗಿರುವ ರಮೇಶ್ ಗೌಡ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯಿಸಲಾಗಿತ್ತು, ಆದರೆ ಅದಕ್ಕೆ ಸೊಪ್ಪು ಹಾಕದ ...

ಕೋಲಾರ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ,  ಅವರ ಸಹೋದರ ಎಚ್.ಡಿ ರೇವಣ್ಣ ಹೊಳೆ ನರಸಿಪುರದಿಂದ ಸ್ಪರ್ಧಿಸುತ್ತಿದ್ದು ತವರು ಜಿಲ್ಲೆ ಹಾಸನದಲ್ಲಿ ರಣತಂತ್ರ ರೂಪಿಸುತ್ತಿದ್ದಾರೆ, ಈ ನಡುವೆ ಅವರ ಮತ್ತೊಬ್ಬ ಸಹೋದರ ರಮೇಶ್ ಗೌಡ ಕೋಲಾರದಲ್ಲಿ ಸದ್ದಿಲ್ಲದೇ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ. 
ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್,ಡಿ ದೇವೇಗೌಡ ಅವರ 4ನೇ ಮಗನವಾಗಿರುವ ರಮೇಶ್ ಗೌಡ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯಿಸಲಾಗಿತ್ತು, ಆದರೆ ಅದಕ್ಕೆ ಸೊಪ್ಪು ಹಾಕದ ರಮೇಶ್ ಗೌಡ ಜಿಲ್ಲೆಯಲ್ಲಿ ಉಂಟಾಗಿರುವ ಅಸಮಾಧಾನವನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತಿದ್ದಾರೆ.
ಜಿಲ್ಲೆಯ ಪ್ರಮುಖ ನಾಯಕರ ಜೊತೆ ಸಭೆ ನಡೆಸಿದ ರಮೇಶ್ ಗೌಡ ಟಿಕೆಟ್ ವಂಚಿತರಾಗಿರುವ ಮಾಜಿ ಕೃಷಿ ಸಚಿವ ಕೆ. ಶ್ರೀನಿವಾಸ ಗೌಡ ಅವರ ಮನವೊಲಿಕೆಗೆ ಯತ್ನಿಸಿದರು. ಈ ವೇಳೆ ಜೆಡಿಎಸ್ ಉಸ್ತುವಾರಿ ಕಾರ್ಯದರ್ಶಿ ಗೋಪಾಲ ಕೃಷ್ಣ ಅವರು ಉಪಸ್ಥಿತರಿದ್ದರು
ಕೋಲಾರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸಮರ್ಥ ಪೈಪೋಟಿ ನೀಡಿ ಜಯ ಗಳಿಸಬೇಕು ಎಂದು ಪಕ್ಷದ ಮುಖಂಡರುಗಳಿಗೆ ಕರೆ ನೀಡಿದ್ದಾರೆ, ಜಿಲ್ಲೆಯಲ್ಲಿ ಸಮರ್ಥ ನಾಯಕತ್ವದ ಕೊರತೆಯಿದೆ, ಎಲ್ಲಾ ಕಾರ್ಯಕರ್ತನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಲ್ಲಿ ಆತ್ನಸ್ಥೈರ್ಯ ಹೆಚ್ಚಿಸಿ ಪಕ್ಷದ ಗೆಲುವು ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಆರು ಕ್ಷೇತ್ರಗಳಿಗೆ ಭೇಟಿ ನೀಡುವಂತೆ ದೇವೇಗೌಡರು ರಮೇಶ್ ಗೌಡ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, 
ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಕೆ. ಶ್ರೀನಿವಾಸ ಗೌಡ ಅವರಿಗೆ ಟಿಕೆಟ್ ನೀಡಿಲ್ಲ, ಇದರಿಂದ ಶ್ರೀನಿವಾಸ ಗೌಡ ಅಸಮಾಧಾನ ಹೊಂದಿದ್ದು, ಕಾಂಗ್ರೆಸ್ ಸೇರುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT