ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ಸ್ಪರ್ಧಿಸುತ್ತಿಲ್ಲ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲಗೊಂಡಿದ್ದು, ಜೆಡಿಎಸ್ ಪಕ್ಷಕ್ಕೆ ನಾವು ಬೆಂಬಲ ನೀಡುತ್ತೇವೆಂದು ಹೇಳಿದ್ದಾರೆ.
ಮತಗಳು ಕಡಿತಗೊಳ್ಳುವುದರಿಂದ ಬಿಜೆಪಿಗೆ ಲಾಭವಾಗಲಿದೆ ಎಂಬ ಆರೋಪವನ್ನು ಇದೇ ವೇಳೆ ತಿರಸ್ಕರಿಸುವ ಅವರು, ಗುಜರಾತ್, ಜಾರ್ಖಾಂಡ್, ಜಮ್ಮು ಮತ್ತು ಕಾಶ್ಮೀರದಲ್ಲಿಯೂ ನಾವು ಸ್ಪರ್ಧಿಸಿರಲಿಲ್ಲ. ಉತ್ತರಪ್ರದೇಶ ರಾಜ್ಯದ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿರಲಿಲ್ಲ, ಅಲ್ಲಿ ಕಾಂಗ್ರೆಸ್ ಏನಾಯಿತು ಎಂದು ಪ್ರಶ್ನಿಸಿದ್ದಾರೆ.