ಸಂಗ್ರಹ ಚಿತ್ರ 
ರಾಜಕೀಯ

ವಿಪಕ್ಷಗಳ ವಿರೋಧದ ಬೆನ್ನಲ್ಲೇ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಟಿಕೆಟ್‌ಗೆ ಎಐಸಿಸಿ ತಡೆ!

ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಸ್. ಚಂದ್ರಮೌಳಿ ಅವರ‌ ಟಿಕೆಟ್ ಗೆ ಎಐಸಿಸಿ ತಡೆ ನೀಡಿದೆ ಎಂದು ತಿಳಿದುಬಂದಿದೆ.

ಮಡಿಕೇರಿ: ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಸ್. ಚಂದ್ರಮೌಳಿ ಅವರ‌ ಟಿಕೆಟ್ ಗೆ ಎಐಸಿಸಿ ತಡೆ ನೀಡಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷ ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎಚ್.ಎಸ್. ಚಂದ್ರಮೌಳಿ ಅವರು ವೃತ್ತಿಪರ ವಕೀಲರಾಗಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಮೆಹುಲ್ ಚೋಕ್ಸಿ ಪರ ವಕಾಲತ್ತು ವಹಿಸಿದ್ದರು. ಇದೇ ಕಾರಣಕ್ಕೆ ಎಚ್ ಎಸ್ ಚಂದ್ರ ಮೌಳಿ ಅವರಿಗೆ ಟಿಕೆಟ್ ನೀಡಿರುವ ಕುರಿತು ವಿಪಕ್ಷಗಳು ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದಲ್ಲೇ ಹಲವರು ವಿರೋಧ ವ್ಯಕ್ತಪಡಿಸಿದ್ದರು. 
ಈ ವಿಚಾರ ದೇಶವ್ಯಾಪಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಎಐಸಿಸಿ ಪಕ್ಷಕ್ಕೆ ಆಗಲಿರುವ ಮುಜುಗರ ತಪ್ಪಿಸಿಕೊಳ್ಳಲು ಮಡಿಕೇರಿ ಕ್ಷೇತ್ರದ ಟಿಕೆಟ್ ತಡೆ ನೀಡಿದೆ ಎಂದು ಹೇಳಲಾಗಿದೆ. ಈ ಸಂಬಂಧ ಟಿಕೆಟ್ ಪಡೆದಿದ್ದ ಚಂದ್ರ ಮೌಳಿ ಅವರ ನ್ನು ಈ ಸಂಬಂಧ ಚಂದ್ರಮೌಳಿ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಚರ್ಚೆ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರು, ಚಂದ್ರಮೌಳಿ ಅವರನ್ನು ಬೆಂಗಳೂರಿಗೆ ಬರಲು ಹೇಳಿದ್ದು, ಕೆಪಿಸಿಸಿ ಕಚೇರಿಯಲ್ಲಿ ದೀರ್ಘ ಚರ್ಚೆ ನಡೆಸಿದ್ದರು ಎನ್ನಲಾಗಿದೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೆಹುಲ್ ಚೋಕ್ಸಿ ಪರ ಚಂದ್ರಮೌಳಿ ವಕಾಲತ್ತು ವಹಿಸದ್ದರು. ಈ ಹಿನ್ನೆಲೆಯಲ್ಲಿ ಅವರ ಟಿಕೆಟ್ ಗೆ ತಡೆ ನೀಡಲಾಗಿದೆ. ವಂಚನೆ‌ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದ್ದು, ಬಿಜೆಪಿ ವಿರುದ್ಧ ಟೀಕೆಗೆ ಬಳಸುತ್ತಿದೆ. ಇದೀಗ ಆರೋಪಿ‌ ಪರ ವಕೀಲರಿಗೆ‌ ಟಿಕೆಟ್ ನೀಡಿ ಆಗುವ ಮುಜುಗರದಿಂದ ಪಾರಾಗಲು ಚಂದ್ರಮೌಳಿ ಟಿಕೆಟ್‌ಗೆ ತಡೆ ನೀಡಲಾಗಿದೆ‌ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!