ಪ್ರಿಯಾಕೃಷ್ಣ, ಎನ್. ನಾಗರಾಜ್, ಮತ್ತು ಅನಿಲ್ ಲಾಡ್ 
ರಾಜಕೀಯ

277 ಕೋಟ್ಯಾಧಿಪತಿಗಳು, ಪ್ರಿಯಾ ಕೃಷ್ಣ ಅತೀ ಶ್ರೀಮಂತ ಅಭ್ಯರ್ಥಿ: 95 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಆರೋಪ

ಕರ್ನಾಟಕ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಪಕ್ಷದ ಶೇ, 92 ರಷ್ಟು ಅಭ್ಯರ್ಥಿಗಳು ...

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಪಕ್ಷದ ಶೇ, 92 ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ.
ಕಾಂಗ್ರೆಸ್ ನಿಂದ 218 ಅಭ್ಯರ್ಥಿಗಳ ಘೋಷಣೆಯಾಗಿದ್ದು, ಅದರಲ್ಲಿ ಪುನಾರಾಯ್ಕೆ ಬಯಸಿರುವ 148 ಮಂದಿಯಲ್ಲಿ 134 ಅಭ್ಯರ್ಥಿಗಳು ಕೋಟ್ಯಾಧಿಪತಿಗಳು, ಬಿಜೆಪಿಯ 111 ಅಭ್ಯರ್ಥಿಗಳ ಪೈಕಿ 97ಕ್ಕೂ ಹೆಚ್ಚು ಜನ 1 ಕೋಟಿ ರೂ ಮೇಲಿನ ಆಸ್ತಿ ಹೊಂದಿದ್ದಾರೆ, ಜೆಡಿಎಸ್ ಪ್ರಕಟಿಸರುವ 56 ಆಭ್ಯರ್ಥಿಗಳ ಪೈಕಿ 45 ಮಂದಿ ಕೋಟ್ಯಾಧಿಪತಿಗಳಾಗಿದ್ದಾರೆ.
ಗೋವಿಂದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ಅತಿ ಶ್ರೀಮಂತ ಎಂದು ಪರಿಗಣಿಸಲ್ಪಟ್ಟಿದ್ದಾರೆ, 910 ಕೋಟಿ ರೂ, ಆಸ್ತಿ ಘೋಷಮೆ ಮಾಡಿದ್ದಾರೆ, ಹೊಸಕೋಟೆಯ ಎನ್ ನಾಗರಾಜು ಎರಡನೇ ಶ್ರೀಮಂತ ಅಭ್ಯರ್ಥಿಯಾಗಿದ್ದು, 288 ಕೋಟಿ ರು ಘೋಷಿಸಿದ್ದಾರೆ, ಬಳ್ಳಾರಿಯ ಅನಿಲ್ ಲಾಡ್ 288 ಕೋಟಿ ರು, ಆಸ್ತಿ ಘೋಷಿಸಿ 3ನೇ ಸ್ಥಾನದಲ್ಲಿದ್ದಾರೆ, ಬಿಜೆಪಿಯ ಕೆ,ಆರ್ ಪುರ ಅಭ್ಯರ್ಥಿ ಎನ್ ಎಸ್ ನಂದೀಶ್ ರೆಡ್ಡಿ 118 ಕೋಟಿ ಹಾಗೂ ಬಸವನಗುಡಿಯ ಜೆಡಿಎಸ್ ಅಭ್ಯರ್ಥಿ ಕೆ. ಬಾಗೇಗೌಡ 250 ಕೋಟಿ ರು. ಆಸ್ತಿ ಘೋಷಿಸಿದ್ದಾರೆ.
ಕಾಂಗ್ರೆಸ್ ನ 48 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿದ್ದು, ಅದರಲ್ಲಿ 23 ಮಂದಿ ವಿರುದ್ಧ ಗಂಭೀರ ಆರೋಪ ಪ್ರಕರಣಗಳಿವೆ, ಬಿಜೆಪಿಯ 30 ಅಭ್ಯರ್ಥಿಗಳು  ಹಾಗೂ ಜೆಡಿಎಸ್ ನ 9 ಅಭ್ಯರ್ಥಿಗಳ ವಿರುದ್ಧ ಗಂಭೀರ ಆರೋಪಗಳಿದ್ದು, 17 ಅಭ್ಯರ್ಥಿಗಳ ವಿರುದ್ಧ ಸಾಮಾನ್ಯ ಪ್ರಕರಣ ದಾಖಲಾಗಿವೆ ಎಂದು ವರದಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT