ಸಂಗ್ರಹ ಚಿತ್ರ 
ರಾಜಕೀಯ

ಹಾಲಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

ಬಿಜೆಪಿ ಪಕ್ಷದ ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದ್ದು, ತಾವು ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಬಿಜೆಪಿ ಪಕ್ಷದ ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದ್ದು, ತಾವು ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಹಾಲಿ ಲೋಕಸಭಾ ಸದಸ್ಯರಾಗಿರುವ ಶೋಭಾ ಕರಂದ್ಲಾಜೆ ಅವರು, ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಾಗಳು ಹರಿದಾಡುತ್ತಿತ್ತು. ಆದರೆ ಈ ಸುದ್ದಿಗೆ ಸಂಸದೆ ಶೋಭಾ ಕರದ್ಲಾಜೆ ತೆರೆ ಎಳೆದಿದ್ದು, ಯಾವುದೇ ಕಾರಣಕ್ಕೂ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಾರೆ ಎಂದು ಸ್ಪಷ್ಪಪಡಿಸಿದ್ದಾರೆ.
ಈ  ಬಗ್ಗೆ ಬೆಂಗಳೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಸಂಸದೆ ಶೋಭಾ, 'ಲೋಕಸಭಾ ಸದಸ್ಯತ್ವದ ಅವಧಿ ಇನ್ನು ಒಂದು ವರ್ಷವಿದೆ. ಅವಧಿ ಮುಗಿದ ನಂತರ ಪಕ್ಷವೇ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಸವೇಶ್ವರರಿಗೆ ಮಾಲಾರ್ಪಣೆ ಮಾಡುವ ಯೋಗ್ಯತೆ ಸಿದ್ದರಾಮಯ್ಯನವರಿಗೆ ಇಲ್ಲ, ಪ್ರತ್ಯೇಕ ಧರ್ಮ ಮಾಡುವ ಕೆಲಸ ಸಿದ್ದರಾಮಯ್ಯನವರದ್ದಲ್ಲ ಎಂದು ಹರಿಹಾಯ್ದರು. ಅಂತೆಯೇ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬಗ್ಗೆ ಸ್ವಾಮೀಜಿಗಳು, ಧರ್ಮ ಗುರುಗಳು ತೀರ್ಮಾನ ತೆಗೆದುಕೊಳ್ಳಬೇಕು. ನಾಗಮೋಹನ್ ದಾಸ್ ಸಮಿತಿಯಲ್ಲಿ ಒಬ್ಬರೇ ಒಬ್ಬರು ಲಿಂಗಾಯತ ವೀರಶೈವರು ಇರಲಿಲ್ಲ. ಇದರಲ್ಲೇ ಎಲ್ಲವೂ ಅರ್ಥವಾಗುತ್ತದೆ ಎಂದು ಸರ್ಕಾರವನ್ನು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!