ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಬಿಜೆಪಿ ಸೇರಿದ್ದಾರೆ.
ಗುರುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದ ಅವರು, ಇಂದು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ನೇತೃತ್ತವದಲ್ಲಿ ಬಿಜೆಪಿ ಸೇರ್ಪಡೆಯಾದರು,
ಗೋಪಾಲಕೃಷ್ಣ ಅವರಕ ಜೊತೆ ಛಲವಾದಿ ನಾರಾಯಣ ಸ್ವಾಮಿ ಅವರು ಕೂಡ ಬಿಜೆಪಿ ಸೇರಿದ್ದಾರೆ.
ಇಬ್ಬರು ಮುಖಂಡರಿಗೆ ಶಾಲು ಹೊದಿಸಿದ ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.