ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಇಂದೇ ಗೃಹ ಸಚಿವ ರಾಮಲಿಂಗಾ ರೆಡ್ಡಿ ಬಿಟಿಎಂ ಲೇ ಔಟ್ ನಿಂದ, ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದ್ದಾರೆ.