ಮೈಸೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ನಂತರ ಅವರು ನಾಮಪತ್ರ ಸಲ್ಲಿಸಿದರು. ಅವರ ಜೊತೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಜೊತೆಗಿದ್ದರು.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 12ರಂದು ಚುನಾವಣೆ ನಡೆಯಲಿದ್ದು ಮೇ 15ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.