ಶ್ರೀರಾಮುಲು ನಾಮಪತ್ರ ಸಲ್ಲಿಕೆ 
ರಾಜಕೀಯ

ಶ್ರೀರಾಮುಲು ನಾಮಪತ್ರ ಸಲ್ಲಿಕೆ: ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್ ಚೌಹಾಣ್ ಸಾಥ್

ಸಂಸದ ಶ್ರೀರಾಮುಲು ಶನಿವಾರ ಬೆಳಿಗ್ಗೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು....

ಮೊಳಕಾಲ್ಮೂರು: ಸಂಸದ ಶ್ರೀರಾಮುಲು ಶನಿವಾರ ಬೆಳಿಗ್ಗೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಅಪಾರ ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಶ್ರೀರಾಮುಲು ಅವರಿಗೆ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಉಪಸ್ಥಿತರಿದ್ದರು. ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. 
ಮೊಳಕಾಲ್ಮುರು ಕ್ಷೇತ್ರದ ಹಾಲಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಕೈ ತಪ್ಪಿದ‌ ಹಿನ್ನೆಲೆಯಲ್ಲಿ ವಾರದ ಹಿಂದೆ ಕಾರ್ಯರ್ತರ ನಡುವೆ ಸಂಘರ್ಷ ಉಂಟಾಗಿತ್ತು. ನಾಯಕನಹಟ್ಟಿಯಲ್ಲಿ ಪ್ರಚಾರ ಆರಂಭಿಸಲು ಬಂದಿದ್ದ ಶ್ರೀರಾಮುಲುಗೆ ತಿಪ್ಪೇಸ್ವಾಮಿ ಬೆಂಬಲಿಗರು ಘೇರಾವ್ ಹಾಕಿ, ಕಾರಿನ‌ ಮೇಲೆ ಕಲ್ಲು, ಚಪ್ಪಲಿ ತೂರಿದ್ದರು.
ಬಹಿರಂಗ ಸಮಾವೇಶ ನಡೆಸಲಾಗುತ್ತಿದೆ. ವ್ಯಾಪಕ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ