ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಒಂದು ತಿಂಗಳು ಮಾತ್ರ ಬಾಕಿಯಿದೆ.ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಹೆಚ್ಚಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರ ಮಣ್ಣಿನ ಮಗ ಎಂಬ ವರ್ಚಸ್ಸನ್ನು ಬಿಜೆಪಿ ವಿರುದ್ಧ ಅಸ್ತ್ರವನ್ನಾಗಿಸಿಕೊಂಡು ಪ್ರಚಾರ ನಡೆಸುತ್ತಿದೆ. ಪಕ್ಷದ ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಇದು ಕೂಡ ಒಂದಾಗಿದೆ,
ಜೆಡಿಎಸ್ ನಿಂದ ಆಮದಾಗಿರುವ ಸಿದ್ದರಾಮಯ್ಯ ಅವರನ್ನು ಆರಂಭದಲ್ಲಿ ಮೂಲ ಕಾಂಗ್ರೆಸ್ಸಿಗರು ವಿರೋಧಿಸಿದ್ದರು.ಆದರೆ ಸಿದ್ದರಾಮಯ್ಯ ಬಿಜೆಪಿ ಸೋಲಿಸಿ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಕಳೆದ ಕೆಲ ವರ್ಷಗಳಿಂದ ಮೂಲ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಅವರ ಪರವಾಗಿದ್ದಾರೆ,
ಸಿದ್ದರಾಮಯ್ಯ ಅವರ ವಿಚಾರದಲ್ಲಿ ಜಾತಿ ಸಮೀಕರಣ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡುತ್ತದೆ. ಕುರುಬ ಸಮುದಾಯಕ್ಕೆ ಸೇರಿದ ಸಿದ್ದರಾಮಯ್ಯ ಅವರಿಗೆ ಎಸ್ ಸಿ ಎಸ್ ಟಿ ಸಮುದಾಯದ ಅಪಾರ ಬೆಂಬಲವಿದೆ, ಜೊತೆಗೆ ಮುಸ್ಲಿಮರು ಕೂಡ ಬೆಂಬಲಿಸುತ್ತಾರೆ. ಜೊತೆಗೆ ಅಹಿಂದ ಸಂಘಟನೆ ಕೂಡ ಸಿದ್ದರಾಮಯ್ಯ ಅವರಿಗೆ ವರವಾಗಲಿದೆ. ಆದರೆ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಅವರು ಕೈಗೊಂಡ ನಿಲುವು ಸಮುದಾಯದ ಮತದಾರರು ಮತನೀಡದಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರಸ್ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯಾದ್ಯಂತ ತಮ್ಮ ಚುನಾವಣಾ ಪ್ರಚಾರ ಮುಂದುವರಿಸಲಿದ್ದಾರೆ, ಸ್ಥಳೀಯರ ಭಾವನೆಗಳನ್ನು ಅರ್ಥ ಮಾಡಿಕೊಂಡು ಮತ ನೀಡುವಂತೆ ಮನವಿ ಮಾಡಬೇಕಾಗಿದೆ, ಎಐಸಿಸಿ ಕಾರ್ಯದರ್ಶಿ ಕೆ,.ಸಿ ವೇಣುಗೋಪಾಲ್ ಮತ್ತು ರಾಜ್ಯ.ಸಭೆ ಸದಸ್ಯ ರಾಜು ಗೌಡ ಅವರಿಂದ ರಾಹುಲ್ ಗಾಂಧಿ, ಚುನಾವಣಾ ಕಾರ್ಯತಂತ್ರ, ಜಿಲ್ಲಾ ಮಟ್ಟದ ಪ್ರಣಾಳಿಕೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
2013ರಲ್ಲಿ ನೀಡಿದ್ದ ಪ್ರಣಾಳಿಕೆಗಳಲ್ಲಿ ನೀಡಿದ್ದಂತೆ ಶೇ. 90ರಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಪದೇ ಪದೇ ನಮ್ಮನ್ನು ಪ್ರಚೋದಿಸಿ ಕೋಮುವಾದ ಉಂಟು ಮಾಡಲು ಪ್ರಯತ್ನಿಸುಕ್ಕಿದೆ, ಆದರೆ ಇದಕ್ಕೆ ನಮ್ಮಲ್ಲಿ ಅವಕಾಶವಿಲ್ಲ ಎಂದು ಎಐಸಿಸಿ ಸಾಮಾಜಿಕ ಮಾಧ್ಯಮ ಘಟಕದ ಮುಖ್ಯಸ್ಥೆ ದಿವ್ಯ ಸ್ಪಂದನ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics