ಬೆಂಗಳೂರು: ಚಾಮುಂಡೇಶ್ವರಿ ಜೊತೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ನನಗೆ ಪಕ್ಷ ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ನಾನು ಚಾಮುಂಡೇಶ್ವರಿಯಿಂದ ಮಾತ್ರ ಸ್ಪರ್ಧಿಸಲು ನಿರ್ಧರಿಸಿದ್ದೆ. ಆದರೆ ಈಗ ಪಕ್ಷ ಮತ್ತು ಉತ್ತರ ಕರ್ನಾಟಕದ ಜನತೆಯ ಒತ್ತಡಕ್ಕೆ ಮಣಿದು ಬಾದಾಮಿಯಿಂದಲೂ ಸ್ಪರ್ಧಿಸುತ್ತಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಇದಕ್ಕು ಮುನ್ನ ಮೈಸೂರಿನಲ್ಲಿ, ಚಾಮುಂಡೇಶ್ವರಿಯಲ್ಲಿ ಸೋಲುವ ಭಯದಿಂದ ಬಾದಾಮಿಗೆ ಹೋಗುತ್ತಿದ್ದಾರೆ ಎಂಬ ಬಿಜೆಪಿ ಮತ್ತು ಜೆಡಿಎಸ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಸೋಲಿನ ಭಯದಿಂದ ಕುಮಾರಸ್ವಾಮಿ ಎರಡು ಕಡೆ ನಿಲ್ಲುತ್ತಿದ್ದಾರಾ? ಮೋದಿ ಸೋಲಿನ ಭಯದಿಂದ ಎರಡು ಕಡೆ ಸ್ಪರ್ಧೆ ಮಾಡಿದ್ರ?, ಜೆಡಿಎಸ್ನವರಂತೆ ಕೀಳು ಮಟ್ಟದ ಟೀಕೆ ಮಾಡುವುದಿಲ್ಲ. ಬಾದಾಮಿಯಲ್ಲಿ ಯಾರೇ ಸ್ಪರ್ಧಿಸಿಲಿ ನನಗೆ ಯಾವ ಭಯವಿಲ್ಲ ಎಂದರು.