ರಾಜಕೀಯ

ಸಿಎಂ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧಿಸಿದರೆ ತಪ್ಪಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದರಲ್ಲಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ. 
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಎರಡು ಕಡೆ ಸ್ಪರ್ಧಿಸುವ ಕುರಿತು ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಖರ್ಗೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲವೇ. ಆಗ ಇಂಥಹ ಪ್ರಶ್ನೆ ಎದುರಾಗಿತ್ತೇ ಎಂದು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಸೋಲಿನ ಭಯದಿಂದ ಎರಡು ಕಡೆ ಸ್ಪರ್ಧಿಸುತ್ತಿದ್ದಾರೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಹಾಗೇನೂ ಇಲ್ಲ. ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಆರೋಗ್ಯ ಸರಿ ಇಲ್ಲ ಎಂಬ ಕಾರಣಕ್ಕೆ ಅವರಿಗೆ ಟಿಕೆಟ್‌ ನೀಡಿರಲಿಲ್ಲ. ಮುಖ್ಯಮಂತ್ರಿಯವರು ಬಾದಾಮಿಯಿಂದ ಸ್ಪರ್ಧಿಸಿದರೆ ಸ್ವಾಗತಿಸುವುದಾಗಿ ಚಿಮ್ಮನಕಟ್ಟಿ ಹಾಗೂ ದೇವರಾಜ ಪಾಟೀಲ ಅವರಿಬ್ಬರೂ ಹೇಳಿದ್ದಾರೆ. ಹಾಗಾಗಿ ಪಕ್ಷವು ಈ ನಿರ್ಧಾರ ಕೈಗೊಂಡಿದೆ ಎಂದು ಸಮರ್ಥಿಸಿಕೊಂಡರು.
ಇದೇ ವೇಳೆ ಸಿದ್ದರಾಮಯ್ಯ ಅವರು ಎರಡೂ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!