ಬಿಎಸ್ ಯಡಿಯೂರಪ್ಪ 
ರಾಜಕೀಯ

ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲು ಸಿದ್ಧ: ಬಿಎಸ್ ವೈ

ಮೈಸೂರಿನ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದಲೂ....

ಚಿಕ್ಕಮಗಳೂರು: ಮೈಸೂರಿನ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದಲೂ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಲು ತಾವು ಸಿದ್ಧ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.
ನಮ್ಮ ಪಕ್ಷ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ಬಯಸಿದರೆ ತಾವು ಬಾದಾಮಿಯಿಂದಲೂ ಸ್ಪರ್ಧಿಸಲು ಸಿದ್ಧ. ಬಾದಾಮಿ ಅಭ್ಯರ್ಥಿ ಕುರಿತು ಅಮಿತ್ ಶಾ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಸಿಎಂ ವಿರುದ್ಧ ಸ್ಪರ್ಧಿಸುವಂತೆ ನನಗೆ ಸೂಚಿಸಿದರೆ ನಾನು ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಬಿಎಸ್ ವೈ ತಿಳಿಸಿದ್ದಾರೆ.
ಬಾದಾಮಿ ಅಭ್ಯರ್ಥಿ ಬಗ್ಗೆ ಈಗಾಗಲೇ ನಿರ್ಧರಿಸಲಾಗಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಾಗುವುದು ಎಂದು ಯಡಿಯೂರಪ್ಪ ವರದಿಗಾರರಿಗೆ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಅವರನ್ನೇ ಕಣಕ್ಕಿಳಿಸಿ ತೀವ್ರ ಸ್ಪರ್ಧೆ ಒಡ್ಡಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ ಎನ್ನಲಾಗುತ್ತಿದ್ದು, ಸಂಸದ ಬಿ ಶ್ರೀರಾಮುಲು ಮತ್ತು ಪಿ.ಸಿ.ಗದ್ದಿಗೌಡರ್‌ ಹೆಸರು ಸಹ ಮುಂಚೂಣಿಯಲ್ಲಿದೆ. ಈಶ್ವರಪ್ಪ ಹಾಗೂ ಬಾದಾಮಿ ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಆಯ್ಕೆಯನ್ನೂ ಬಿಜೆಪಿ ಮುಕ್ತವಾಗಿರಿಸಿದೆ.
ಒಂದು ವೇಳೆ, ಯಡಿಯೂರಪ್ಪ ಅವರು ಬಾದಾಮಿಯಿಂದಲೂ ಕಣಕ್ಕಿಳಿದರೆ ಮೂರೂ ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದಂತಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ