ಬೆಂಗಳೂರು: ವರುಣಾ ಕ್ಷೇತ್ರದಿಂದ ತಮ್ಮ ಮಗ ಬಿವೈ ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಘೋಷಿಸಿದ ಬೆನ್ನಲ್ಲೇ, ಟಿಕೆಟ್ ವಂಚಿತ ವಿಜಯೇಂದ್ರ ಅವರಿಗೆ ಬಿಜೆಪಿ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಬಿವೈ ವಿಜಯೇಂದ್ರ ಚುನಾವಣಾ ಕಣದಿಂದ ಹಿಂದೆ ಸರಿಯುವಂತಾಗಿದ್ದಕ್ಕೆ ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ವಿಜಯೇಂದ್ರ ಅವರನ್ನು ಬಿಜೆಪಿ ಯುವ ಮೋರ್ಚದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ್ದು, ವಿಜಯೇಂದ್ರ ಹಳೆ ಮೈಸೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಬಸವರಾಜ್, ತೇಜಸ್ವಿ ಸೂರ್ಯ ಅವರಿಗೆ ಅನುಕ್ರಮವಾಗಿ ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಂಗಳೂರು ನಗರಗಳ ಜವಾಬ್ದಾರಿ ನೀಡಿರುವಂತೆ ವಿಜಯೇಂದ್ರ ಅವರಿಗೆ ಮೈಸೂರು ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ.