ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದು ಹೈ ಕಮಾಂಡ್ ನಿರ್ಧಾರ: ಖರ್ಗೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಉತ್ತಮ ನಿಲುವು ತಾಳಲಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮುಂದಿನ ಮುಖ್ಯಮಂತ್ರಿ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಿದ್ದರಾಮಯ್ಯ ಅವರೇ  ಸ್ವಯಂಚಾಲಿತವಾಗಿ ಆಯ್ಕೆ ಆಗುವುದಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಹೈಕಮಾಂಡ್ ಸಮಾಲೋಚನೆ ನಡೆಸಿ  ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತದೆ. ಸಿದ್ದರಾಮಯ್ಯ ನಾಯಕತ್ವದಲ್ಲಿ  ಚುನಾವಣೆ ಎದುರಿಸಲಾಗುತ್ತದೆ. ಆದರೆ, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಡೆ ಹಿಡಿಯಲಾಗುತ್ತದೆ ಎಂದರು.

ಒಂದು ವೇಳೆ ನೀವೇ  ಮುಂದಿನ ಮುಖ್ಯಮಂತ್ರಿ ಎಂದು ಹೈಕಮಾಂಡ್ ನಿರ್ಧರಿಸಿದ್ದರೆ ಏನೂ ಹೇಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ಚುನಾವಣೆ ಸಂದರ್ಭದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿ ಮಾಡಬೇಡಿ ಎಂದರು.

ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಕಾಂಗ್ರೆಸ್ ಪ್ರಚಾರ ನಡೆದಿದ್ದು, ಅವರೇ ನಾಯಕ. ಆದರೆ. ಹೈಕಮಾಂಡ್ ಬಯಸಿದ್ದರೆ ಯಾರನ್ನೂ ಬೇಕಾದರೂ ಬದಲಾಯಿಸಬಹುದು , ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ .ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ಅವಕಾಶವಿದ್ದು, ಮತ್ತೆ ಬಹುಮತ ಪಡೆಯುವ ವಿಶ್ವಾಸವಿದೆಎಂದು ತಿಳಿಸಿದರು.

ಸಿದ್ದರಾಮಯ್ಯ  ಎರಡು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ ಬಗ್ಗೆ ಸಮರ್ಥಿಸಿಕೊಂಡ ಖರ್ಗೆ,ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಎರಡು  ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲವೇ ,  ಬಾದಾಮಿ ಕ್ಷೇತ್ರದ ಜನತೆ ಬಯಸಿದ್ದರೆ ಸಿದ್ದರಾಮಯ್ಯ ಅಲ್ಲಿಯೂ ಸ್ಪರ್ಧಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ