ಎಚ್ ಡಿ ದೇವೇಗೌಡ 
ರಾಜಕೀಯ

ಪ್ರಧಾನಿಯಾಗಿ ಅವಧಿ ಪೂರ್ಣಗೊಳಿಸದಿರುವ ಬಗ್ಗೆ ಪಶ್ಚಾತ್ತಾಪವಿದೆ: ದೇವೇಗೌಡ

ದೇಶದ ಪ್ರಧಾನಿಯಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸದಿರುವ ಬಗ್ಗೆ....

ಬೆಂಗಳೂರು: ದೇಶದ ಪ್ರಧಾನಿಯಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸದಿರುವ ಬಗ್ಗೆ ನನಗೆ ಪಶ್ಚಾತ್ತಾಪವಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ದೇವೇಗೌಡ ಅವರು 1994ರಿಂದ 1996ರ ವರೆಗೆ ಎರಡು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 1996ರಲ್ಲಿ ಆಕಸ್ಮಿಕವಾಗಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಮುಖ್ಯಮಂತ್ರಿಯಾಗಿರೂ ನಾನು ಅವಧಿ ಪೂರ್ಣಗೊಳಿಸಿಲ್ಲ ಮತ್ತು ಪ್ರಧಾನಿಯಾಗಿಯೂ ಅವಧಿ ಪೂರ್ಣಗೊಳಿಸಿಲ್ಲ. ಈ ಬಗ್ಗೆ ನನಗೆ ತುಂಬಾ ಬೇಸರ ಇದೆ ಎಂದು ಎಎನ್ಐಗೆ ನೀಡಿದ ಸಂದರ್ಶನದಲ್ಲಿ ದೇವೇಗೌಡರು ಹೇಳಿಕೊಂಡಿದ್ದಾರೆ.
ನಾನು ಪ್ರಧಾನಿಯಾಗಿದ್ದಾಗ ವಿಶೇಷ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿ, ಯಾವ ಪ್ರಧಾನಿಯೂ ಮಾಡದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೆ. ಪ್ರಧಾನಿಯಾಗಿ ತಮ್ಮ 10 ತಿಂಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ಕೋಮುಗಲಭೆ ಇರಲಿಲ್ಲ ಎಂದು ಹೇಳಿದ್ದಾರೆ.
ಈಶಾನ್ಯನ ಎಲ್ಲಾ ಏಳು ರಾಜ್ಯಗಳು ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ. ಆದರೆ ನಾನು ಭೇಟಿ ನೀಡಿದ್ದೆ. ಆ ಸಮಯದಲ್ಲಿ ಕಾಶ್ಮೀರ ಸೇರಿದಂತೆ ಯಾವ ರಾಜ್ಯದಲ್ಲಿ ಕೋಮುಗಲಭೆ ನಡೆದಿತ್ತು ಎಂಬುದನ್ನು ತೋರಿಸಿ ಎಂದಿದ್ದಾರೆ.
ನಾನು ಪ್ರಧಾನಿಯಾಗಿದ್ದಾಗ ಹಲವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದೆ. ಆ ನಿಯಮಗಳನ್ನು ಇಂದಿಗೂ ಬದಲಾಯಿಸಿಲ್ಲ ಎಂದು ಮಾಜಿ ಪ್ರಧಾನಿ ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್