ಸಂಗ್ರಹ ಚಿತ್ರ 
ರಾಜಕೀಯ

ಶಾಂತಿನಗರದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಎನ್ ಎ ಹ್ಯಾರಿಸ್

ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.

ಬೆಂಗಳೂರು: ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.
ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್ ಎ ಹ್ಯಾರಿಸ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಹ್ಯಾರಿಸ್, ಶಾಂತಿನಗರದಲ್ಲಿ ಕಾಂಗ್ರೆಸ್ ಶತಾಯಗತಾಯ ಗೆಲ್ಲಲಿದೆ. ಆ ಮೂಲಕ ಸತತ ಮೂರನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಇದೇ ಹ್ಯಾರಿಸ್ ಅವರ ಪುತ್ರ ಎನ್ ಎ ನಲಪಾಡ್ ಪಬ್ ವೊಂದರಲ್ಲಿ ಗಲಾಟೆ ಮಾಡಿಕೊಂಡು ವಿದ್ವತ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಬಂಧಿತರಾಗಿರುವ ನಲಪಾಡ್ ಇನ್ನೂ ಬಂಧನದಲ್ಲೇ ಇದ್ದಾರೆ. ಇದೇ ಕಾರಣಕ್ಕೆ ಹ್ಯಾರಿಸ್ ಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಹೇಳಲಾಗಿತ್ತು. ಅಂತೆಯೇ ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಹ್ಯಾರಿಸ್ ಅವರ ಹೆಸರು ನಾಪತ್ತೆಯಾಗಿತ್ತು. ಬಳಿಕ ನಡೆಜದ ಸತತ ರಾಜಕೀಯ ಬೆಳವಣಿಗೆಗಳ ಬಳಿಕ ಮತ್ತು ಹ್ಯಾರಿಸ್ ಅವರ ಒತ್ತಾಯದ ಮೇರೆಗೆ ಶಾಂತಿನಗರದಲ್ಲಿ ಮತ್ತೆ ಅವರಿಗೆ ಟಿಕೆಟ್ ನೀಡಲಾಗಿದೆ. ನಿನ್ನೆಯಷ್ಟೇ ಹ್ಯಾರಿಸ್ ಶಾಂತಿನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು. 
ಈ ಬಗ್ಗೆ ಮಾತನಾಡಿರುವ ಹ್ಯಾರಿಸ್, ಶಾಂತಿ ನಗರ ಮಿನಿ ಭಾರತವಿದ್ದಂತೆ. ಇಲ್ಲಿ ನಾನು ಸಾಕಷ್ಚು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಪ್ರಮುಖವಾಗಿ ನಗರದ ವಾಣಿಜ್ಯ ಕೇಂದ್ರವಾಗಿ ಶಾಂತಿನಗರವನ್ನು ರೂಪಿಸಿದ್ದೇನೆ. ಕಳೆದ ಐದು ವರ್ಷದಲ್ಲಿ ಕ್ಷೇತ್ರದ ಅಭಿವೃದ್ದಿಗಾಗಿ ಹತ್ತಾರು ಕೋಟಿ ಅನುದಾನ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಇನ್ನೂ ಸಾಕಷ್ಟು ಕಾರ್ಯಕ್ರಮಗಳು ಚಾಲನೆಯಾಗಬೇಕಿದೆ. ಪ್ರಮುಖವಾಗಿ ನಾನು ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಕಷ್ಟಕಾಲದಲ್ಲಿ ಹಲವರು ನನ್ನ ಜೊತೆಯಲ್ಲಿದ್ದರು ಎಂದು ಹ್ಯಾರಿಸ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

SCROLL FOR NEXT