ಶ್ರೀರಾಮುಲು-ಜನಾರ್ದನ ರೆಡ್ಡಿ
ಹುಬ್ಬಳ್ಳಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರು ಎಂದು ನಾವು ಎಲ್ಲಿಯೂ ಕರೆದಿಲ್ಲ ಎಂದು ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ.
ಜನಾರ್ದನ ರೆಡ್ಡಿಯನ್ನು ನಾವು ಎಲ್ಲಿಯೂ ಪ್ರಚಾರಕ್ಕೆ ಕರೆದಿಲ್ಲ. ಅವರೇನು ಗಲ್ಲು ಶಿಕ್ಷೆಗೆ ಗುರಿಯಾಗಿಲ್ಲ. ಅವರು ಸಹ ಸಾಮಾನ್ಯ ಕಾರ್ಯಕರ್ತರಾಗಿ ಪ್ರಚಾರ ಮಾಡಲಿದ್ದಾರೆ ಎಂದು ವಾಮನಾಚಾರ್ಯ ಹೇಳಿದರು.
ಜನಾರ್ದನ ರೆಡ್ಡಿ ಪ್ರಚಾರ ಮಾಡುವುದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಿದೆ ಎಂದು ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪನವರು ಹೇಳಿಲ್ಲ. ಮೊಳಕಾಲ್ಮೂರು ಕ್ಷೇತ್ರದಲ್ಲಿ ನಮ್ಮ ನಾಯಕರು ಶ್ರೀರಾಮುಲು ಹೊರತು, ಜನಾರ್ದನ ರೆಡ್ಡಿ ಅಲ್ಲ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ವಾಮಾನಾಚಾರ್ಯ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೂ ರಾಜ್ಯ ಸರ್ಕಾರ ಆ ಹಣವನ್ನು ಸದ್ಬಳಕೆ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಐದು ವರ್ಷದಿಂದ ರಾಜಕೀಯ ಬಿಟ್ಟು ಅಭಿವೃದ್ದಿ ಮಾತ್ರ ಕಂಡಿಲ್ಲ ಎಂದರು.