ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ದಿನೇಶ್ ಗುಂಡೂರಾವ್, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ 
ರಾಜಕೀಯ

ಬಳ್ಳಾರಿ ಅಕ್ರಮ ಗಣಿಗಾರಿಕೆ ಆರೋಪಿಗಳಿಗೆ ಟಿಕೆಟ್ ಹೇಗೆ ನೀಡಿದಿರಿ?: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ರಾಜ್ಯಕ್ಕೆ ...

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸುವ ಮುನ್ನ ಬಿಜೆಪಿ ಮುಖಂಡರನ್ನು ಟೀಕಿಸಿರುವ ಕಾಂಗ್ರೆಸ್ ನಾಯಕರು ಪ್ರಧಾನಿಯವರು ಕಲ್ಲಿದ್ದಲು ಗಣಿಗಾರಿಕೆ ಹಗರಣ ನಡೆಸಿದವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕ ರಣ್ ದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, ಆಡಿಸಿದಂತೆ ಆಡುವ ಗೊಂಬೆಯಂತಿರುವ ಸಿಬಿಐ ಅಕ್ರಮ ಗಣಿಗಾರಿಕೆ ಕೇಸನ್ನು ಮುಚ್ಚಿಹಾಕಿದ್ದು ಮೋದಿಯವರು ಬಳ್ಳಾರಿ ಗ್ಯಾಂಗ್ ನ ರಕ್ಷಕರು ಮತ್ತು ಪೋಷಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬಳ್ಳಾರಿಯ ಅಕ್ರಮ ಗಣಿಗಾರಿಕೆ ಕೇಸಿನ ಆರೋಪಿಗಳಾದ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಮತ್ತಿಬ್ಬರು ಸೋದರರಿಗೆ ವಿಧಾನಸಭೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ 35,000 ಕೋಟಿ ರೂಪಾಯಿಗಳ ಅಕ್ರಮ ಗಣಿಗಾರಿಕೆ ಕೇಸಿನ ತನಿಖೆಯನ್ನು ಸಿಬಿಐ ಮುಚ್ಚಿಹಾಕುವ ಮೂಲಕ ಕೇಂದ್ರ ಸರ್ಕಾರ ಸಿಬಿಐಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಬಳ್ಳಾರಿಯ ಅಕ್ರಮ ಗಣಿಗಾರಿಕೆ ಕೇಸಿನಲ್ಲಿ ಆರೋಪಿಗಳನ್ನು ಬಚಾವ್ ಮಾಡುವ ಮೂಲಕ ಬಿಜೆಪಿ ಸಿಬಿಐಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಬಳ್ಳಾರಿ ಗಣಿಧನಿಗಳೆನಿಸಿರುವ ಬಿಜೆಪಿ ಮುಖಂಡರನ್ನು ಕೇಸಿನಿಂದ ಹೇಗೆ ಸಿಬಿಐ ಬಚಾವ್ ಮಾಡಿತು ಮತ್ತು ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಹೇಗೆ ನೀಡಲಾಯಿತು ಎಂಬುದನ್ನು ಬಿಜೆಪಿ ಮತ್ತು ಪ್ರಧಾನ ಮಂತ್ರಿ ವಿವರಿಸಬೇಕು ಎಂದು ಸುರ್ಜೆವಾಲ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?