ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಅತ್ತ ರಾಜ್ಯ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
ಪ್ರಮುಖವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ತಲಾ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಉಳಿದಂತೆ ಮಾಜಿ ಕ್ರಿಕೆಟಿಗ ಅಜರುದ್ದೀನ್, ಮನಮೋಹನ್ ಸಿಂಗ್, ಸಚಿನ್ ಪೈಲಟ್, ಶಶಿ ತರೂರ್, ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ, ನಟ ಚಿರಂಜೀವಿ, ಅಂಬರೀಶ್, ರಮ್ಯಾ, ಯೋಗಿ ಆದಿತ್ಯಾನಾಥ್, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ನಟಿ ಶೃತಿ, ತಾರಾ, ಹೇಮಾ ಮಾಲಿನಿ, ಎಸ್ ಎಂ ಕೃಷ್ಣ ಕೂಡ ಸ್ಚಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿ ಇಂತಿದೆ.