ಕಾಂಗ್ರೆಸ್ಗೆ ತೀವ್ರ ಮುಜುಗರ; ರಾಹುಲ್ ಗಾಂಧಿ ಪ್ರಚಾರದ ವೇಳೆ 'ಮೋದಿ' ಪರ ಜೈಕಾರ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಭಾರೀ ಮುಖಭಂಗವಾಗಿದೆ...
ಹೊನ್ನಾವರ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಭಾರೀ ಮುಖಭಂಗವಾಗಿದೆ.
ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿರುವ ದಕ್ಷಿಣ ಕರಾವಳಿ ಭಾಗದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸುತ್ತಿದ್ದು ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದಾರೆ. ಹೊನ್ನಾವರ ಶರಾವತಿ ಸರ್ಕಲ್ ನಲ್ಲಿ ರೋಡ್ ಶೋ ನಡೆಸುತ್ತಿದ್ದಾಗ ನೆರದಿದ್ದ ಜನರು ಪ್ರಧಾನಿ ನರೇಂದ್ರ ಮೋದಿ ಪರ ಜೈಕಾರ ಹಾಕಿದ್ದಾರೆ.
ಇದರಿಂದ ತೀವ್ರ ಮುಖಭಂಗಕ್ಕೀಡಾದ ರಾಹುಲ್ ಗಾಂಧಿ ವಿಚಲಿತರಾಗಿ ಭಾಷಣವನ್ನು ಮೊಟುಕುಗೊಳಿಸಿದರು. ಮೋದಿಗೆ ಜೈ ಮೋದಿಗೆ ಜೈ ಎಂದು ಘೋಷಣೆ ಕೂಗಿದರು. ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿಯೇ ರಾಹುಲ್ ಗಾಂಧಿ ಮುಜುಗರಕ್ಕೀಡಾದರು.