ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಶುಕ್ರವಾರ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಮಂಗಳೂರಿನ ಟಿಎಂಪೈ ಹಾಲ್ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಜನಾರ್ದನ ಪೂಜಾರಿ, ಬಿ.ಕೆ.ಹರಿಪ್ರಸಾದ್ ಮತ್ತಿತರರು ಹಾಜರಿದ್ದರು.
ಇದಕ್ಕೂ ಮೊದಲು ಪ್ರಣಾಳಿಕೆ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೆ ಗೌರವಯುತ ಸ್ವಾಗತ ನೀಡಲಾಯಿತು. ಹಲವು ನಾಯಕರು ಪೂಜಾರಿ ಅವರ ಕಾಲಿಗೆರಗಿ ಆಶೀರ್ವಾದ ಪಡೆದದ್ದು ಕಾರ್ಯಕ್ರಮದ ವಿಶೇಷವಾಗಿತ್ತು.