ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನಾಮಪತ್ರ ಹಿಂಪಡೆಯಲು ನಿನ್ನೆ ಕೊನೆಯ ದಿನವಾಗಿದ್ದು ಒಟ್ಟಾರೆ 583 ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಮೇ 12ರಂದು ಮತದಾನ ನಡೆಯಲಿದ್ದು 2655 ಅಭ್ಯರ್ಥಿಗಳ ರಣಕಣದಲ್ಲಿದ್ದು ಅಭ್ಯರ್ಥಿಗಳ ಭವಿಷ್ಯ ಮೇ 15ರಂದು ನಿರ್ಧಾರವಾಗಲಿದೆ. ಈ ಬಾರಿ 219 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚುನಾವಣಾ ಆಯೋಗ ಇಂದು ಸಂಪೂರ್ಣ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಪರ 222 ಕ್ಷೇತ್ರ, ಜೆಡಿಎಸ್ 201 ಮತ್ತು ಬಹುಜನ ಸಮಾಜವಾದಿ ಪಕ್ಷದ 18 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಳೆದ ಬಾರಿ ಬಳ್ಳಾರಿಯಲ್ಲಿ ಅತಿ ಹೆಚ್ಚು ಅಂದರೆ 29 ಅಭ್ಯರ್ಥಿಗಳಿದ್ದರು. ಆದರೆ ಈ ಬಾರಿ ಮುಳಬಾಗಿಲಿನಲ್ಲಿ 39 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಹಾಗಾಗಿ ಮೂರು ಇವಿಎಂಗಳನ್ನು ಬಳಸಬೇಕಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics