ಅಮಿತ್ ಶಾ 
ರಾಜಕೀಯ

ಕೇಂದ್ರ ಕೊಟ್ಟ ಅನುದಾನ ಎಲ್ಲಿ ಹೋಯ್ತು, ಸಿಎಂ ಲೆಕ್ಕ ಕೊಡಲಿ: ಅಮಿತ್ ಶಾ

ಐದು ವರ್ಷ ಆಡಳಿತ ನಡೆಸಿದ ಸಿಎಂ ಸಿದ್ದರಾಮಯ್ಯ ಲೆಕ್ಕಕೊಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳ: ಐದು ವರ್ಷ ಆಡಳಿತ ನಡೆಸಿದ ಸಿಎಂ ಸಿದ್ದರಾಮಯ್ಯ ಲೆಕ್ಕಕೊಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ 'ಚುನಾವಣಾ ಪ್ರಚಾರದ ಬಹಿರಂಗ ಸಮಾವೇಶ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ''ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್‌ ಬಾಬಾ ಅವರು ಮಾತಿಗೊಮ್ಮೆ ಮೋದಿ ಅವರು ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಎಂದು ಕೇಳುತ್ತಾರೆ. ಅವರಿಗೆ ನಾವು ಉತ್ತರ ಕೊಡಬೇಕಿಲ್ಲ. ಮುಂದಿನ ಲೋಕಸಭೆ ಚುನಾವಣೆ ಬಂದಾಗ ಕರ್ನಾಟಕಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಎನ್ನುವುದನ್ನು ಜನರ ಮುಂದೆ ಲೆಕ್ಕಸಹಿತ ವಿವರಿಸುತ್ತೇವೆ'' ಎಂದರು. 
'ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ 13ನೇ ಹಣಕಾಸು ಯೋಜನೆಯಡಿ ಕರ್ನಾಟಕಕ್ಕೆ 88ಸಾವಿರ ಕೋಟಿ ರೂ. ನೀಡಲಾಗಿತ್ತು. ಈಗಿನ ಬಿಜೆಪಿ ಸರಕಾರ 1ಲಕ್ಷ 19ಸಾವಿರ ಕೋಟಿ ರೂ. ಅನುದಾನ ನೀಡಿದೆ. ಆದರೆ ಈ ಹಣ ಜನರ ಅಭಿವೃದ್ಧಿಗೆ ಬಳಕೆಯಾಗಿಲ್ಲ. ಗಂಗಾವತಿ ನಗರ ಪವಿತ್ರ ಸ್ಥಳ, ಅಂಜನಿಪುತ್ರ ಹನುಮಾನ್‌ ಜನಿಸಿದ ಪುಣ್ಯಭೂಮಿ. ಇಂತಹ ನೆಲಕ್ಕೆ ಬಂದಿರುವುದು ನನ್ನ ಪುಣ್ಯ'' ಎಂದು ಹೇಳಿದರು. ತಮ್ಮ ಆಗಮನ ವಿಳಂಬವಾಗಿದ್ದಕ್ಕೆ ಕ್ಷಮೆ ಕೋರಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT