ಬಿಜೆಪಿ ಜತೆ ಕುಮಾರಸ್ವಾಮಿ ಕೈಜೋಡಿಸಿದರೆ ಮನೆಯಿಂದ ಹೊರಕ್ಕೆ: ಎಚ್ಡಿ ದೇವೇಗೌಡ
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ಬಿಜೆಪಿ ಜತೆ ಕೈಜೋಡಿಸಿದರೆ ಮನೆಯಿಂದಲೇ ಹೊರಹಾಕುವುದಾಗಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ಬಿಜೆಪಿ ಜತೆ ಕೈಜೋಡಿಸಿದರೆ ಮನೆಯಿಂದಲೇ ಹೊರಹಾಕುವುದಾಗಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ವಿಧಾಸನಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಗೌಡ ಅವರು ರಾಜಕೀಯದ ವಿಷಯದಲ್ಲಿ ಕುಮಾರಸ್ವಾಮಿ ನನ್ನ ಮಾತನ್ನು ಮೀರಿ ಯಾವ ನಿರ್ಧಾರ ಕೈಗೊಳ್ಳಬಾರದು. ಒಂದು ವೇಳೆ ಮಾತು ಮೀರಿ ಕುಮಾರಸ್ವಾಮಿ ಬಿಜೆಪಿ ಸಖ್ಯ ಬೆಳೆಸಿದರೆ ಮನೆಯಿಂದ ಹೊರಹಾಕುತ್ತೇನೆ ಎಂದು ಹೇಳಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಮತ್ತೆ ಜೆಡಿಎಸ್ ಬಿಜೆಪಿ ಜತೆ ಕೈಜೋಡಿಸಲಿದೆ ಎಂದು ಹೇಳಲಾಗಿತ್ತು.