ರಾಜಕೀಯ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ಅಧಿಕಾರ ಸ್ವೀಕಾರ

Srinivas Rao BV
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಂಸದ ಎಚ್ ವಿಶ್ವನಾಥ್ ಆ.05 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. 
ಆ.05 ರಂದೇ ರಾಜ್ಯಾಧ್ಯಕ್ಷರ ಆಯ್ಕೆಯಾಗಿದ್ದು, ಅದೇ ದಿನದಂದು ಹೆಚ್ ಡಿ ಕುಮಾರಸ್ವಾಮಿ ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರವನ್ನೂ ಹಸ್ತಾಂತರಿಸಿದ್ದಾರೆ. 
'ಕುಮಾರಸ್ವಾಮಿ ಮುಖ್ಯಮಂತ್ರಿಯಾದ ನಂತರ ಎರಡೂ ಹುದ್ದೆ ನಿಭಾಯಿಸುವುದು ಕಷ್ಟವಾಗಿದ್ದ ಹಿನ್ನೆಲೆಯಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುವುದು ಅನಿವಾರ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಾಕಷ್ಟು ರಾಜಕೀಯ ಅನುಭವವುಳ್ಳ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 
ಮೊದಲು ಕಾಂಗ್ರೆಸ್‌ ಪಕ್ಷದಲ್ಲಿದ್ದ ಎಚ್.ವಿಶ್ವನಾಥ್ ಅವರು 2018ರ ಚುನಾವಣೆ ಸಮಯದಲ್ಲಿ ಜೆಡಿಎಸ್ ಸೇರಿದ್ದರು. ಹುಣಸೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ, ಜಯಗಳಿಸಿದ್ದರು. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
SCROLL FOR NEXT