ಬೆಂಗಳೂರು: 2019 ಲೋಕಸಭಾ ಚುನಾವಣೆ ವೇಳೆ ಹಾಸನದಿಂದ ನನ್ನ ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗಿಳಿಯುವುದಿಲ್ಲ ಎಂದು ಸಚಿವ ಹೆಚ್.ಡಿ.ರೇವಣ್ಣ ಅವರು ಶನಿವಾರ ಹೇಳಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು, ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಹಾಸನ ಕ್ಷೇತ್ರದಿಂದ ನನ್ನ ಮೊಮ್ಮಗ ಪ್ರಜ್ವಲ್ ಸ್ಪರ್ಧಿಸುತ್ತಾನೆಂದು ಹೇಳಿದ್ದರು. ಇದೀಗ ಬದಲಾದ ರಾಜಕೀಯ ಬೆಳವಣಿಗೆಗಳಿಂದಾಗಿ ದೇವೇಗೌಡ ಅವರೇ ಸ್ವತಃ ಹಾಸನ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲು ಮುಂದಾಗಿದ್ದಾರೆ.
ಈ ಹಿನ್ನಲೆಯಲ್ಲಿ ಸುದ್ದಿಗಾರರೊಂಡಿಗೆ ಮಾತನಾಡಿರುವ ರೇವಣ್ಣ ಅವರು, ಪಕ್ಷದ ಹಿಸಾಸಕ್ತಿಯಂತೆ ನನ್ನ ಮಗ ಕಾರ್ಯನಿರ್ವಹಿಸಲಿ. ಪ್ರಸ್ತುತ ಪ್ರಜ್ವಲ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾನೆ. ಭವಿಷ್ಯದಲ್ಲಿ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾನೆಂದು ಹೇಳಿದ್ದಾರೆ.