ಸಂಗ್ರಹ ಚಿತ್ರ 
ರಾಜಕೀಯ

ಇನ್ನೆಂದಿಗೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ನಾನು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ನಿರ್ಧಾರ ಅಚಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನವದೆಹಲಿ: ಯಾವುದೇ ಕಾರಣಕ್ಕೂ ನಾನು ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ನಿರ್ಧಾರ ಅಚಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಇನ್ನು ಮುಂದೆ ಯಾವ ಕಾರಣಕ್ಕೂ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಈ ನಿರ್ಧಾರ ಅಚಲ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದರು.
'ಚುನಾವಣಾ ರಾಜಕಾರಣ ನನಗೆ ಬೇಡ. ಆದರೆ  ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ. ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ ಎಂದರು. ಇದೇ ವೇಳೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಸ್ಥಳೀಯ ಘಟಕಗಳಿಗೆ ನೀಡಲಾಗಿದೆ. ಸ್ಥಳೀಯ ನಾಯಕರು ತಮ್ಮಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಜೆಡಿಎಸ್ ಅಥವಾ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಿದರು. 
ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗಿ ಕೇಳಿಬರುತ್ತಿದ್ದು, ಇದಕ್ಕೆ ಸ್ವತಃ ಸಿದ್ದರಾಮಯ್ಯ ಅವರು ಈ ಮೂಲಕ ತೆರೆ ಎಳೆದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು