ಎಚ್. ವಿಶ್ವನಾಥ್ 
ರಾಜಕೀಯ

ಜೆಡಿಎಸ್ ಅಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ: ಸಿದ್ದು ವಿರುದ್ಧ 'ದೊಡ್ಡಗೌಡ'ರ ಕುರುಬಾಸ್ತ್ರ

ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಕೆಲಸದ ಹೊರೆ ತಗ್ಗಿಸುವ ಸಲುವಾಗಿ ಜೆಡಿಎಸ್ ಸರ್ವೋಚ್ಚ ನಾಯಕ ಎಚ್ .ಜಿ ದೇವೇಗೌಡ ಪಕ್ಷದ ರಾಜ್ಯಾಧ್ಯಕ್ಷರಾಗಿ ..

ಬೆಂಗಳೂರು: ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಕೆಲಸದ ಹೊರೆ ತಗ್ಗಿಸುವ ಸಲುವಾಗಿ ಜೆಡಿಎಸ್ ಸರ್ವೋಚ್ಚ ನಾಯಕ ಎಚ್ .ಜಿ ದೇವೇಗೌಡ ಪಕ್ಷದ ರಾಜ್ಯಾಧ್ಯಕ್ಷರಾಗಿ ಎಚ್. ವಿಶ್ವನಾಥ್ ಅವರನ್ನು ನೇಮಕ ಮಾಡಿದ್ದಾರೆ. 
ಜೆಡಿಎಸ್ ಒಕ್ಕಲಿಗರ ಹಾಗೂ ತಂದೆ ಮಕ್ಕಳ ಎಂಬ ಆರೋಪವನ್ನು ಸುಳ್ಳು ಮಾಡಲು ದೇವೇಗೌಡರು ಈ ನಿರ್ಧಾರ ಕೈಗೊಂಡಿದ್ದಾರೆ. ವಿಶ್ವನಾಥ್ ಮೈಸೂರು ಭಾಗದ ಪ್ರಮುಖ ಕುರುಬ ನಾಯಕರಾಗಿದ್ದಾರೆ, 2017 ರಲ್ಲಿ ಕಾಂಗ್ರೆಸ್ ತೊರೆದು ವಿಶ್ವನಾಥ್ ಜೆಡಿಎಸ್ ಸೇರ್ಪಡೆಯಾದರು. ಪಕ್ಷವನ್ನು ಪುನರ್ ಸಂಘಟಿಸುತ್ತಿದೆ. ಜೆಡಿಎಸ್ ಗ್ರಾಮೀಣ ಭಾಗದ ಜೊತೆ  ಸಾಂಪ್ರಾದಾಯಿಕವಾಗಿ  ಹೊಂದಿಕೊಂಡಿದೆ, ಒಕ್ಕಲಿಗರು ಮತ್ತು ಮುಸ್ಲಿಂ ವೋಟ್ ಬ್ಯಾಂಕ್ ಎಂಬ ಅಭಿಪ್ರಾಯವನ್ನು ಹೋಗಲಾಡಿಸಲು ಹೊಸ ಕ್ರಮ ಕೈಗೊಳ್ಳಲಾಗಿದೆ,
ಜೆಡಿಎಸ್ ಅಪ್ಪ-ಮಕ್ಕಳ ಪಕ್ಷ ಎಂಬ ಆರೋಪಗಳನ್ನು ಸುಳ್ಳು ಮಾಡುವುದಕ್ಕೆ ದೇವೇಗೌಡರು ವಿಶ್ವನಾಥ್ ಅವರನ್ನು ಜೆಡಿಎಸ್ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ತಮ್ಮದು ಅಪ್ಪ-ಮಗನ ಪಕ್ಷವಲ್ಲ ಎಂಬುದು ವಿಶೇಷವಾಗಿ ಯಡಿಯೂರಪ್ಪ ಅವರಿಗೆ ಈ ನಿರ್ಧಾರದಿಂದ ಮನವರಿಕೆಯಾಗುತ್ತದೆ ಎಂದು ದೇವೇಗೌಡರು ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಜೊತೆಗಿನ ಮುನಿಸಿನಿಂದ ವಿಶ್ವನಾಥ್ ಕಾಂಗ್ರೆಸ್ ತೊರೆದು 2017ರಲ್ಲಿ ಜೆಡಿಎಸ್ ಸೇರಿದರು. ಕುರುಬ ಸಮುದಾಯದ ಮತಗಳನ್ನು ಪಡೆಯುವಲ್ಲಿ ವಿಶ್ವನಾಥ್ ಸೇರ್ಪಡೆ ಸಹಾಯವಾಗುತ್ತದೆ ಎಂದು ನಂಬಲಾಗಿದೆ, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಕುರುಬ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ. ಜೆಡಿಎಸ್ ದಕ್ಷಿಣ ಕರ್ನಾಟಕಕ್ಕೆ ಸೀಮಿತ ಎಂಬ ಇಮೇಜ್  ತಡೆಯಲು ವಿಶ್ವನಾಥ್ ನೇಮಕ ಸಹಾಯವಾಗುತ್ತದೆ.
ಪಕ್ಷ ನನಗೆ ಅತಿ ದೊಡ್ಡ ಜವಾಬ್ದಾರಿ ನೀಡಿದೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚಿನ ಸ್ಥಾನ ಗೆಲ್ಲುವುದೇ ಪ್ರಮುಖ ಉದ್ದೇಶವಾಗಿದೆ ಎಂದು ವಿಶ್ವನಾಥ್ ಹೇಳಿದ್ದಾರೆ. 
ಕಾಂಗ್ರೆಸ್ ಗೆ ನಿರ್ಣಾಯಕವಾಗಿರುವ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧವಾಗಿ ವಿಶ್ವನಾಥ್ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಅವರನ್ನು ಸಮರ್ಥವಾಗಿ ಎದುರಿಸಲು ವಿಶ್ವನಾಥ್ ಅವರಿಗೆ ಈ ಹುದ್ದೆ ನೀಡಲಾಗಿದೆ. ಇನ್ನೂ ಪಕ್ಷದ ವಿವಿಧ ಘಟಕಗಳಿಗೆ ಪದಾಧಿಕಾರಿ ನೇಮಕ ಮಾಡಲಾಗುವುದು  ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!