ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

'ಆಪರೇಷನ್ ಕಮಲ' ನಾನು ಮಾಡಲ್ಲ, ಅದರ ಅಗತ್ಯವೇ ಇಲ್ಲ: ಬಿಎಸ್ ವೈ

ನಾನು ಆಪರೇಷನ್ ಕಮಲ ಮಾಡಲ್ಲ, ಅದರ ಅಗತ್ಯವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ
Raghavendra Adiga
Updated On : 8 Aug 2018, 4:48 am
ಬೆಂಗಳೂರು: ತುರ್ತು ಸಭೆ ಇದ್ದ ಕಾರಣ ನಾನು ದೆಹಲಿಗೆ ಹೊಗಿದ್ದೆ, ಆಪರೇಷನ್ ಕಮಲ ಮಾಡೋಕಲ್ಲ. ಇಷ್ಟಕ್ಕೂ ನಾನು ಆಪರೇಷನ್ ಕಮಲ ಮಾಡಲ್ಲ, ಅದರ ಅಗತ್ಯವೂ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಅವರುಗಳ ಹೇಳಿಕೆ ಉಲ್ಲೇಖಿಸಿದ ಯಡಿಯೂರಪ್ಪ ಈ ಮೇಲಿನಂತೆ ಪ್ರತಿಕ್ರಯಿಸಿದ್ದಾರೆ.  ಬೆಂಗಳೂರಿನ ಡಾಲರ್ಸ್ ಕಾಲೋನಿ ತಮ್ಮ ನಿವಾಸದಲ್ಲಿ  ಅವರು ಸುದ್ದಿಗಾರರೊಡನೆ ಮಾತನಾಡಿದರು.
ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರೊಡನೆ ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದೇನೆ. ತುರ್ತು ಸಭೆಯಲ್ಲಿ ಭಾಗವಹಿಸಲು ನಾನು ದೆಹಲಿಗೆ ತೆರಳಿದ್ದೆ. ನಾವು ವಿರೋಧ ಪಕ್ಷದವರಾಗಿದ್ದುಕೊಂಡು ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ, ಸಚಿವ ಡಿ.ಕೆ. ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Advertisement

Advertisement

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಆಗಬೇಕಾದ ಕೆಲಸದ ಕುರಿತಂತೆ ಕೇಂದ್ರ ಸಚಿವರುಗಳೊಡನೆ ಮಾತುಕತೆ ನಡೆಸಿದ್ದೇನೆ ಎಂದ ಯಡಿಯೂರಪ್ಪ, ನಾಳೆಯಿಂದಲೇ ನಮ್ಮ ಪಕ್ಷದ ನಾಯಕರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಬೀದರ್ ಜಿಲ್ಲೆಯಿಂದ ಈ ಪ್ರವಾಸ ಕಾರ್ಯಕ್ರಮ ಪ್ರಾರಂಭವಾಗಲಿದೆ. ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿಕೊಳ್ಳುವುದು ಅಗತ್ಯವಿದೆ. ಇನ್ನು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಕೊರತೆ ಆಗಿದೆ, ಬರದ ಛಾಯೆ ಆವರಿಸಿದೆ. ಪ್ರವಾಸದ ವೇಳೆ ಈ ಎಲ್ಲಾ ಅಂಶಗಳನ್ನು ಗಮನಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕರುಣಾನಿಧಿಗೆ ಸಂತಾಪ
ಹಿರಿಯ ರಾಜಕಾರಣಿ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಸಾವು ಅತ್ಯಂತ ನೋವು ತಂದಿದೆ ಎಂದ ಯಡಿಯೂರಪ್ಪ ಕರುಣಾನಿಧಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕರುಣಾನಿಧಿ ಮುಖ್ಯಮಂತ್ರಿಗಳಾಗಿದ್ದ ವೇಳೆ ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪನೆ ಆಯಿತು. ಇದೇ ವೇಳೆ ಕರ್ನಾಟಕದಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಎರಡೂ ಭಾಷಿಗರ ನಡುವೆ ಸಾಮರಸ್ಯಕ್ಕೆ ವಿಶೇಷ ಪ್ರಯತ್ನ ನಡೆಸಲಾಗಿತ್ತು. ಅವರ ನನ್ನ ಒಡನಾಟ ಎಂದೂ ಮರೆಯುವಂತಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲೆಂದು ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments