ಎ.ಎಚ್ ವಿಶ್ವನಾಥ್ 
ರಾಜಕೀಯ

ದೇವೇಗೌಡ ದೇಶದ ಮುಂದಿನ ಪ್ರಧಾನಮಂತ್ರಿ, ಪ್ರಜ್ವಲ್ ರೇವಣ್ಣ ರಾಜಕೀಯಕ್ಕೆ ಬರಬೇಕು: ಎಚ್. ವಿಶ್ವನಾಥ್

ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭವಾಗಿದ್ದು, ಎಚ್.ಡಿ ದೇವೇಗೌಡರು ಮುಂದಿನ ಪ್ರಧಾನಮಂತ್ರಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ...

ಮೈಸೂರು: ದೇಶದಲ್ಲಿ ಪ್ರಾದೇಶಿಕ ಪಕ್ಷಗಳ ಯುಗ ಆರಂಭವಾಗಿದ್ದು, ಎಚ್.ಡಿ ದೇವೇಗೌಡರು ಮುಂದಿನ ಪ್ರಧಾನಮಂತ್ರಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. 
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಪ್ರಾದೇಶಿಕ ಪಕ್ಷಗಳೊಂದಿಗೆ ಸೇರಿ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣ, ಮಧ್ಯ ಈಶಾನ್ಯ ಭಾಗದಲ್ಲಿಯೂ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿದೆ. ಇದನ್ನು ಗಮನಿಸಿದರೆ ಇಂದಿನ ರಾಜಕೀಯ ಪ್ರಾಂತೀಯ ಪಕ್ಷಗಳ ಕಡೆ ವಾಲಿರುವುದು ತಿಳಿಯುತ್ತದೆ.
ಜನರು ಸ್ಥಳೀಯ ಪಕ್ಷಗಳಿಗೆ ಒಲವು ತೋರುತ್ತಿದ್ದಾರೆ. ಹಾಗಾಗಿ ಈ ಪಕ್ಷಗಳು ಒಗ್ಗೂಡಿ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಕಾಲ ಬಂದಿದೆ. ಈ ಕಾರ್ಯದಲ್ಲಿ ಮುಂದಾಳತ್ವ ವಹಿಸುವ ಶಕ್ತಿ ದೇವೇಗೌಡ ಅವರಿಗಿದೆ ಎಂದು ಹೇಳಿದರು.
ನಾಯಕತ್ವದ ಎಲ್ಲಾ ಲಕ್ಷಣಗಳನ್ನು ಹೊಂದಿರುವ ಸಚಿವ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ ಅವರು ರಾಜಕೀಯ ಕ್ಷೇತ್ರಕ್ಕೆ ಬರಬೇಕು ಎಂದು ಎಚ್‌.ವಿಶ್ವನಾಥ್‌ ಹೇಳಿದರು. 'ಪ್ರಜ್ವಲ್‌ ರಾಜಕೀಯ ಭವಿಷ್ಯ ಉಜ್ವಲವಾಗಿದೆ. ಆತನಿಗೆ ಸಾಕಷ್ಟು ದೂರದೃಷ್ಟಿ ಇದ್ದು, ಕನ್ನಡ ಹಾಗೂ ಇಂಗ್ಲಿಷ್‌ ಭಾಷೆ ಮೇಲೆ ಹಿಡಿತವಿದೆ. ಅಲ್ಲದೆ, ನಾಯಕತ್ವದ ಗುಣಗಳನ್ನೂ ಮೈಗೂಡಿಸಿಕೊಂಡಿದ್ದಾರೆ. ಹೀಗಾಗಿ ಆತ ರಾಜಕೀಯದಲ್ಲಿ ಉತ್ತಮವಾಗಿ ಬೆಳೆಯುವ ಭರವಸೆಯ ನಾಯಕನಾಗಲಿದ್ದಾರೆ,'' ಎಂದು ಬಣ್ಣಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT