ಎಚ್.ಡಿ,ದೇವೇಗೌಡ 
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ: ದೇವೇಗೌಡ; ಮಂಡ್ಯದಿಂದ ಟಿಕೆಟ್ ಸಿಕ್ಕರೆ ನಾನೇ ಅದೃಷ್ಟವಂತ: ಪ್ರಜ್ವಲ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗ ಹಾಗೂ ಸಚಿವ ಎಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ಸ್ಪರ್ಧೆ ಖಚಿತ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ...

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗ ಹಾಗೂ ಸಚಿವ ಎಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ಸ್ಪರ್ಧೆ ಖಚಿತ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಹಾಸನದ ಹರದನಹಳ್ಳಿಯಲ್ಲಿ ಮಾತನಾಡಿದ ದೇವೇಗೌಡರು ಪ್ರಜ್ವಲ್ ರೇವಣ್ಣ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲಿದ್ದಾರೆ ಎಂದು ಹೇಳಿದರು. 
ಆದರೆ ಯಾವ ಕ್ಷೇತ್ರದಿಂದ ಎಂಬ ಗುಟ್ಟು ಬಿಟ್ಟುಕೊಡಲಿಲ್ಲ,  ಕುಮಾರ ಸ್ವಾಮಿಯವರು ಏಕೆ ರಾಷ್ಟ್ರ ರಾಜಕೀಯಕ್ಕೆ ಏಕೆ ಬರುತ್ತಾರೆ ಅವರು ಇನ್ನೂ 10 ವರ್ಷ ರಾಜ್ಯದಲ್ಲಿಯೇ ಆಡಳಿತ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಇನ್ನೂ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸ್ಪರ್ಧಿಸುತ್ತಾರೆ ಎಂದು ದೇವೇಗೌಡರು ನೀಡಿರುವ ಹೇಳಿಕೆಯಿಂದ ನನಗೆ ತುಂಬಾ ಖುಷಿಯಾಗಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಪ್ರಜ್ವಲ್ ಹೇಳಿದ್ದಾರೆ,.
ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ದೇವೇಗೌಡರು, ಕುಮಾರ ಸ್ವಾಮಿ ಮತ್ತು ಎಚ್ ಡಿ ರೇವಣ್ಣ ನಿರ್ಧರಿಸುತ್ತಾರೆ ಎಂದು ಪ್ರಜ್ವಲ್ ತಿಳಿಸಿದ್ದಾರೆ. ಮಂಡ್ಯದಿಂದ ಪ್ರಜ್ವಲ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಂಡ್ಯದಲ್ಲಿ 7 ಕ್ಷ್ತೇತ್ರಗಳನ್ನು ಅಲಿಲನ ಜನ ಜೆಡಿಎಸ್ ಗೆ ನೀಡಿದ್ದಾರೆ. ಆ ಪುಣ್ಯಭೂಮಿಯಿಂದ ಸ್ಪರ್ಧಿಸಲು ಅವಕಾಶ ಸಿಕ್ಕರೇ ಅದು ನನ್ನ ಅದೃಷ್ಟ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!