ಎಚ್.ಡಿ ದೇವೇಗೌಡ ಮತ್ತು ಎಚ್.ಡಿ ಕುಮಾರ ಸ್ವಾಮಿ 
ರಾಜಕೀಯ

ವಾಜಪೇಯಿ ಅವರ ಸ್ಥಾನವನ್ನೂ ಯಾರು ತುಂಬಲು ಸಾಧ್ಯವಿಲ್ಲ: ಎಚ್.ಡಿ ದೇವೇಗೌಡ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದ ದೇಶಕ್ಕೆ ಅಪಾರ ನಷ್ಟವಾಗಿದೆ, ಭಾರತೀಯ ರಾಜಕೀಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ...

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದ ದೇಶಕ್ಕೆ ಅಪಾರ ನಷ್ಟವಾಗಿದೆ, ಭಾರತೀಯ ರಾಜಕೀಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ತಮ್ಮ ಶ್ರದ್ದಾಂಜಲಿ ಸಂದೇಶದಲ್ಲಿ  ವಾಜಪೇಯಿ ಅವರ ಬಗ್ಗೆ ಮಾತನಾಡಿರುವ ಅವರು, 
ಪ್ರಧಾನ ಮಂತ್ರಿಯಾಗಿ ದೇಶಕ್ಕೆ ಅವರು ಅಪಾರ ಸೇವೆ ಮಾಡಿದ್ದಾರೆ. ಅವರೊಬ್ಬ ಶ್ರೇಷ್ಟ ನಾಯಕ, ಸಂಸದೀಯ ಪಟು. ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಚ್‌.ಡಿ. ದೇವೇಗೌಡ ಅಟಲ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. 
ರಾಜಕೀಯ ಜೀವನದಲ್ಲಿ ಶತ್ರುವನ್ನೂ ಕೂಡ ಕಟುವಾದ ಶಬ್ಧದಿಂದ ಟೀಕಿಸಿದವರಲ್ಲ. ನಾನು ಪ್ರಧಾನಿಯಾಗಿ ರಾಜೀನಾಮೆ ಕೊಡುವ ವೇಳೆ ದೂರವಾಣಿ ಮುಖೇನ ಅಧಿಕಾರ ಉಳಿಸಿಕೊಡುತ್ತೇನೆ ಎಂದು ಹೇಳಿದ್ರು. ರಾಜಕಾರಣದಲ್ಲಿ ಅತ್ಯಂತ ಎತ್ತರಕ್ಕೆ ಬೆಳೆದವರು. ಪಾಕಿಸ್ತಾನದ ಸಂಬಂಧ ಕುದುರಿಸಲು ಲಾಹೋರ್‌ಗೆ ಬಸ್ ಯಾತ್ರೆ ಮಾಡಿದ್ರು. ಮುಷರಫ್ ಅವರನ್ನು ಕರೆಸಿ ಎಲ್ಲ ರೀತಿಯ ಪ್ರಯತ್ನ ಮಾಡಿದ್ರು. ಆದ್ರೆ ಸಫಲವಾಗಲಿಲ್ಲ ಎಂದು ಅವರು ನೆನಪಿಸಿಕೊಂಡಿದ್ದಾರೆ. 
ಅಟಲ್‌ ಜೀ ಶಾಂತೀಯತೆ ಕಾಪಾಡಲು ಪ್ರಯತ್ನ ಮಾಡಿದ್ರು. ಜತೆಗೆ ನಮ್ಮ ಸೈನಿಕರ ಸಾಮರ್ಥ್ಯವನ್ನೂ ತೋರಿಸಿಕೊಟ್ಟಿದ್ದಾರೆ. ರಾಜ್ಯ, ರಾಷ್ಟ್ರದ ಆಡಳಿತ ಹೇಗೆ ನಡೆಸಬೇಕು ಎಂದು ಗೋದ್ರಾ ಪ್ರಕರಣ ಆದಾಗ ಅಂದಿನ ಸಿಎಂ ಮೋದಿ ಅವರಿಗೆ ರಾಜಧರ್ಮ ಪಾಲನೆ ಮಾಡಿಲ್ಲ ಎಂದು ಕಠಿಣವಾಗಿ ಹೇಳಿದ್ರು. ತಮ್ಮ ಪಕ್ಷದ ಸಿಎಂ ಆಗಿದ್ರೂ ಅಂತಮಾತು ಹೇಳಿದ್ದು ಅವರ ವ್ಯಕ್ತಿತ್ವ ಎಂತದ್ದು ಎಂದು ತೋರಿಸುತ್ತದೆ ಎಂದು ದೇವೇಗೌಡರು ಹೇಳಿದ್ದಾರೆ. 
ಇನ್ನೂ ವಾಜಪೇಯಿ ಅವರ ನಿಧನಕ್ಕೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್