ಎಂಬಿ ಪಾಟೀಲ್ 
ರಾಜಕೀಯ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಚುನಾವಣೆ: ಎಂ.ಬಿ ಪಾಟೀಲ್ ಸಹೋದರನಿಗೆ ಕಾಂಗ್ರೆಸ್ ಟಿಕೆಟ್?

ಬಸನಗೌಡ ರಾ. ಪಾಟೀಲ ಯತ್ನಾಳ ರಾಜೀನಾಮೆಯಿಂದ ತೆರವಾಗಿರುವ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ....

ವಿಜಯಪುರ: ಬಸನಗೌಡ ರಾ. ಪಾಟೀಲ ಯತ್ನಾಳ ರಾಜೀನಾಮೆಯಿಂದ ತೆರವಾಗಿರುವ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಸಪ್ಟೆಂಬರ್ 6 ರಂದು ಮತದಾನ ನಡೆಯಲಿದ್ದು, .ಮಾಜಿ ಸಚಿವ ಎಂ.ಬಿ. ಪಾಟೀಲ್ ಸಹೋದರ ಸುನಿಲ್ ಗೌಡ ಬಿ. ಪಾಟೀಲ್ ಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.
ಕಾಂಗ್ರೆಸ್ಸಿನಿಂದ ವಿಜಯಪುರ ಜಿಲ್ಲೆಯಲ್ಲಿ ಮೂವರು ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಮಾಜಿ ಸಚಿವ ಎಂ.ಬಿ. ಪಾಟೀಲ್ ಸಹೋದರ ಸುನಿಲ್ ಗೌಡ ಬಿ. ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ ಹಾಗೂ ಮಲ್ಲಿಕಾರ್ಜುನ ಲೋಣಿ ಅವರ ಮಧ್ಯೆ ತೀವ್ರ ಪೈಪೋಟಿ ಎದುರಾಗಿದೆ.  ಜೊತೆಗೆ ಮಾಜಿ ಶಾಸಕ ಸಿ. ಎಸ್. ನಾಡಗೌಡ ಅವರ ಹೆಸರೂ ಕೇಳಿ ಬರುತ್ತಿದೆ.
ಮಾಜಿ ಸಚಿವ ಎಂ.ಬಿ. ಪಾಟೀಲ ತಮ್ಮ ಸುನಿಲಗೌಡ ಬಿ. ಪಾಟೀಲ ಈಗಾಗಲೇ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದು, ಟಿಕೆಟ್ ಸಿಗುವ ವಿಶ್ವಾಸ ಹೊಂದಿದ್ದಾರೆ.  ಮಾಜಿ ಸಚಿವ ಎಂ.ಬಿ. ಪಾಟೀಲ್ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕೈಗೊಂಡಿರವ ನೀರಾವರಿ ಯೋಜನೆಗಳು ಮತ್ತು ಹೈಕಮಾಂಡ್ ಮಟ್ಟದಲ್ಲಿ ಹೊಂದಿರುವ ವರ್ಚಸ್ಸು ಸುನಿಲಗೌಡ ಬಿ. ಪಾಟೀಲ್ ಪರ ಇರುವ ಪೂರಕ ಅಂಶಗಳಾಗಿವೆ.
ವಿಜಯಪುರ ಜಿಲ್ಲೆಯವರೇ ಆದ ಮತ್ತು ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ವಿರೋಧಿ ಬಣದಲ್ಲಿರುವ ಆರೋಗ್ಯ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ್ ಅವರು ಸುನಿಲಗೌಡ ಬಿ. ಪಾಟೀಲ ಅವರಿಗೆ ಟಿಕೆಟ್ ನೀಡಲು ವಿರೋಧಿಸುವುದೂ ದಟ್ಟವಾಗಿದೆ. ಗೆಲುವೊಂದೇ ಮಾನದಂಡವಾಗಿಸಿ ಯಾರನ್ನು ಆಯ್ಕೆ ಮಾಡಲಿದೆ ಎಂಬುದು ಕುತೂಹಲ ಕೆರಳಿಸಿದೆ.
ಈಗಾಗಲೇ ಸಚಿವ ಸ್ಥಾನ ಸಿಗದಿರುವ ಎಂ.ಬಿ.ಪಾಟೀಲ್‌ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡು ಪಕ್ಷದ ಅಭ್ಯರ್ಥಿಯನ್ನು ಸೋಲಿಸುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಪಕ್ಷದ ನಾಯಕರು ಸುನಿಲ್‌ ಗೌಡ ಪಾಟೀಲ್‌ಗೆ ಟಿಕೆಟ್‌ ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು