ರಾಜಕೀಯ

ಪರಿಷತ್ ಉಪ ಚುನಾವಣೆ: ಮಾಜಿ ಸಚಿವ ಎಂಬಿ ಪಾಟೀಲ್ ಸೋದರ ನಾಮಪತ್ರ ಸಲ್ಲಿಕೆ

Raghavendra Adiga
ವಿಜಯಪುರ: ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಜೆ ಅಂತಿಮಗೊಂಡಿದೆ. ಮಾಜಿ ಸಚಿವ ಎಂಬಿ ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.
ವಿಜಯಪುರದ ಜಿಲ್ಲಾಧಿಕಾರಿಗಳಕಛೇರಿಯಲ್ಲಿ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ ಸುನೀಲಗೌಡ ಪಾಟೀಲ್ ಅವರೊಡನೆ ಸೋದರ ಎಂಬಿ ಪಾಟೀಲ್ ಸಹ ಇದ್ದರು. 
"ಕಾಂಗ್ರೆಸ್ ಹೈಕಮಾಂಡ್ ನನ್ನ ಸೋದರನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದು ಜೆಡಿಎಸ್ ಸಹ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಲಿದೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.
ಮತದಾರರ ಮೇಲೆ ನಮಗೆ ವಿಶ್ವಾಸ ಇದೆ ಎಂದ ಪಾಟಿಲ್ ಮತದಾರರು ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುನೀಲಗೌಡ ಪಾಟೀಲ್ ನಾಮಪತ್ರ ಸಲ್ಲಿಕೆಗೆ ಎಸ್ ಆರ್ ಪಾಟೀಲ್, ಉಮಾಶ್ರೀ, ಎಚ್ ವೈ ಮೇಟಿ, ಸಿಎಸ್ ನಾಡಗೌಡ ಸೇರಿ ಹಲೌ ಮುಖಂಡರು ಜತೆಯಾಗಿದ್ದರು.
ಬಸನಗೌಡ ಪಾಟೀಲ್ ಯತ್ನಾಳ್‍ ರಿಂದ ತೆರವಾದ  ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಆ. 29 ರಿಂದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆ ಆರಂಭವಾಗು=ತ್ತಿದೆ. ಸೆ.3ರಂದು ಫಲಿತಾಂಶ ಹೊರ ಬೀಳಲಿದೆ.
SCROLL FOR NEXT