ಎ. ಮಂಜು 
ರಾಜಕೀಯ

ದೋಸ್ತಿ ಸರ್ಕಾರ ಉರುಳಿದರೆ ಅದಕ್ಕೆ ಸಿಎಂ ಅಣ್ಣ ರೇವಣ್ಣನೇ ಕಾರಣ: ಎ.ಮಂಜು

ಒಂದು ವೇಳೆ ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿದರೆ ಅದಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ...

ಹಾಸನ: ಒಂದು ವೇಳೆ ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿದರೆ ಅದಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅಣ್ಣ, ಸಚಿವ ಎಚ್ ಡಿ ರೇವಣ್ಣ ಅವರೇ ಕಾರಣ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ.ಮಂಜು ಅವರು ಸೋಮವಾರ ಹೇಳಿದ್ದಾರೆ.
ಇಂದು ಸಕಲೇಶಪುರದ ಬಿಸಿಲೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜು ಅವರು, ಕಾಂಗ್ರೆಸ್ ಬಲಹೀನವಾಗಲು ಜೆಡಿಎಸ್ ದ್ವೇಷ ರಾಜಕಾರಣವೇ ಕಾರಣ. ಒಂದು ವೇಳೆ ಸರ್ಕಾರ ಉರುಳಿದರೆ ಸಿಎಂ(ಎಚ್ ಡಿಕೆ) ಅಣ್ಣನೇ(ಎಚ್ ಡಿ ರೇವಣ್ಣ) ಕಾರಣ ಎಂದು ವಾಗ್ದಾಳಿ ನಡೆಸಿದರು. 
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಬಲಹೀನವಾಗುತ್ತಿದೆ. ಅದಕ್ಕೆ ಜೆಡಿಎಸ್ ದ್ವೇಷದ ರಾಜಕಾರಣವೇ ಕಾರಣ. ಸಿಎಂ ಕುಮಾರಸ್ವಾಮಿಯವರಿಗೆ ಬಹಿರಂಗ ಎಚ್ಚರಿಕೆ ಕೊಡುತ್ತಿದ್ದೇನೆ, ನಾವು ಇನ್ನೂ ದ್ವೇಷದ ರಾಜಕಾರಣ ಸಹಿಸಲು ಸಾಧ್ಯವಿಲ್ಲ ಎಂದರು.
ಹಾಸನ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ. ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಗತಿಯೇನು ಎಂದು ಮಾಜಿ ಸಚಿವರು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್