ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಹೇಳಿಕೆ ಕಿಡಿ ತಣ್ಣಗಾಗಿಸಲು ಕಾಂಗ್ರೆಸ್ ಅಧ್ಯಕ್ಷರ ಮಧ್ಯಪ್ರವೇಶ 
ರಾಜಕೀಯ

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಹೇಳಿಕೆ: ಕಿಡಿ ತಣ್ಣಗಾಗಿಸಲು ಕಾಂಗ್ರೆಸ್ ಅಧ್ಯಕ್ಷರ ಪ್ರಯತ್ನ

ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಅಂದುಕೊಂಡಿದ್ದೇನೆ ಎಂಬ ಮಾಜಿ ಸಿಎಂ ಸಿದ್ದರಮಾಯ್ಯ ಅವರ ಹೇಳಿಕೆ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ.

ಬೆಂಗಳೂರು: ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಅಂದುಕೊಂಡಿದ್ದೇನೆ ಎಂಬ ಮಾಜಿ ಸಿಎಂ ಸಿದ್ದರಮಾಯ್ಯ ಅವರ ಹೇಳಿಕೆ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮೈತ್ರಿ ಸರ್ಕಾರದ ಅಸ್ಥಿತ್ವಕ್ಕೆ ತಳುಕುಹಾಕಿ ಹಲವು ವಿಶ್ಲೇಷಣೆಗಳು ಪ್ರಕಟವಾಗುತ್ತಿದ್ದಂತೆಯೇ ಸರ್ಕಾರ ಉಳಿಸುವ ಜವಾಅನ್ದಾರಿಯನ್ನು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಅಧ್ಯಕ್ಷರ ಹೆಗಲಿಗೆ ವಹಿಸಿದ್ದಾರೆ. 
ಲೋಕಸಭಾ ಚುನಾವಣೆ ವರೆಗೂ ಸರ್ಕಾರದ ಅಸ್ಥಿತ್ವ ಉಭಯ ಪಕ್ಷಗಳಿಗೂ ಅನಿವಾರ್ಯವಾಗಿದೆ. ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ರಾಜ್ಯ ನಾಯಕರಿಗೆ ಸೂಚನೆ ನೀಡಲು ಹೈಕಮಾಂಡ್ ಧಾವಿಸಿದ್ದು, ಸರ್ಕಾರದ ಮೈತ್ರಿ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಎಲ್ಲಾ ನಾಯಕರಿಗೆ ಸೂಚನೆ ನೀಡಿದೆ, 
ರಾಹುಲ್ ಗಾಂಧಿ ಸಹ ಪಕ್ಷದ ಶಾಸಕರನ್ನು ಒಗ್ಗಟ್ಟಿನಿಂದ ಇರುವಂತೆ ಸೂಚನೆ ನೀಡಿದ್ದು, ಈ ಹೊಣೆಗಾರಿಕೆಯನ್ನು ಗೃಹ ಸಚಿವ ಪರಮೇಶ್ವರ್ ಹಾಗೂ ಡಿಕೆ ಶಿವಕುಮಾರ್ ಗೆ ವಹಿಸಲಾಗಿದೆ. ತಮ್ಮ ಹೇಳಿಕೆ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು 5 ವರ್ಷದ ನಂತರ ಬರುವ ಚುನಾವಣೆ ಬಗ್ಗೆ ಮಾತನಾಡಿದ್ದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT