ಸಂಗ್ರಹ ಚಿತ್ರ 
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ: ತಾಯಿ ರಂಜಿತಾ ಹೇಳಿಕೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.
ನಗರಸಭೆ ಚುನಾವಣೆ ನಿಮಿತ್ತ ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ ಖಚಿತ ಎಂದು ಹೇಳಿದರು. 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನ ರಾಷ್ಟ್ರೀಯ ಮುಖಂಡರು ರಮ್ಯಾಗೆ ಸೂಚನೆ ನೀಡಿದ್ದಾರೆ. ಅದಕ್ಕೆ ರಮ್ಯಾ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರ ಅವರು ಮಂಡ್ಯಕ್ಕೆ ಭೇಟಿ ನೀಡಿ ಸ್ಥಳೀಯ ಮುಖಂಡರ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.
ಅಂತೆಯೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ ಅವರು, ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ರಮ್ಯಾ ಗೆಲುವಿಗೆ ಶ್ರಮಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT