ಬಿಜೆಪಿ ಸೇರಿದ ಕಾಂಗ್ರೆಸ್ ಮಾಜಿ ಸಚಿವ ಬಾಬುರಾವ್ ಚಿಂಚನಸೂರು
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ಸಿನ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬುರಾವ್ ಚಿಂಚನಸೂರುರವರು ಬಿಜೆಪಿಗೆ ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಅವರು, ಕಳೆದ ಬಾರಿ ನಡೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾರಣವಲ್ಲ. ನನ್ನ ಸೋಲಿಗೆ ಕಾಂಗ್ರೆಸ್‍ನವರೇ ಮೂಲ ಕಾರಣ. ನನ್ನ ಏಳಿಗೆಯನ್ನು ಸಹಿಸದೇ, ಕುತಂತ್ರದಿಂದ ನನ್ನನ್ನು ಸೋಲಿಸಿದ್ದಾರೆ ಎಂದು ಹರಿ ಹಾಯ್ದರು.
ಸಮ್ಮಿಶ್ರ ಸರ್ಕಾರ ವಿರುದ್ಧ ಹರಿಹಾಯ್ದ ಯಡಿಯೂರಪ್ಪ ರಾಜ್ಯದಲ್ಲಿ ಸರ್ಕಾರ ಇದೇ ಎಂದೇ ಅನ್ನಿಸುತ್ತಿಲ್ಲ. ವಿಧಾನಸೌಧದಲ್ಲಿ ಯಾವ ಸಚಿವರು ಸಹ ಕೈಗೇ ಸಿಗುತ್ತಿಲ್ಲ. ಜಿಲ್ಲೆಗಳಿಗೂ ಹೋಗಿ ಜನರ ಕಷ್ಟ ಕೂಡ ಕೇಳುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರ ಗುದ್ದಾಟದಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ನಾವು ಯಾರೂ ಸಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಬಾರದು. ಸಮ್ಮಿಶ್ರ ಸರ್ಕಾರದ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು. ಅವರೇ ಬಡಿದಾಕೊಂಡು ಕುಸಿದರೆ, ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos